ನಾಗಾಲ್ಯಾಂಡ್​ನಲ್ಲಿ ಮೊದಲ ಬಾರಿಗೆ ಮಹಿಳಾ ಶಾಸಕಿ ಆಯ್ಕೆ : ಎನ್‌ಡಿಪಿಪಿಯ ಹೆಖಾನಿ ಜಖಾಲು ಅವರಿಗೆ ಐತಿಹಾಸಿಕ ಗೆಲುವು

ಕೋಹಿಮ: ನಾಗಾಲ್ಯಾಂಡ್ ರಾಜ್ಯ ಸ್ಥಾನಮಾನವನ್ನು ಪಡೆದ 60 ವರ್ಷಗಳ ನಂತರ ಇಂದು ಮೊದಲ ಬಾರಿ ಮಹಿಳಾ ಶಾಸಕಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಮಿತ್ರಪಕ್ಷವಾದ ಎನ್‌ಡಿಪಿಪಿಯ ಹೆಕಾನಿ ಜಖಾಲು ಅವರು ದಿಮಾಪುರ್ 3 ಕ್ಷೇತ್ರದಿಂದ ಗೆದ್ದಿದ್ದಾರೆ. ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಒಟ್ಟು 183 ಅಭ್ಯರ್ಥಿಗಳ ಪೈಕಿ ನಾಲ್ವರು ಮಹಿಳೆಯರಲ್ಲಿ 48 ವರ್ಷದ ವಕೀಲೆ ಹೆಕಾನಿ ಜಖಾಲು ಒಬ್ಬರು. ಪಶ್ಚಿಮ ಅಂಗಮಿ ಕ್ಷೇತ್ರದಲ್ಲಿ ಎನ್‌ಡಿಪಿಪಿಯ ಮತ್ತೊಬ್ಬ ಮಹಿಳಾ ಅಭ್ಯರ್ಥಿ ಸಲ್ಹೌಟುನೊ ಕ್ರೂಸ್ ಮುನ್ನಡೆಯಲ್ಲಿದ್ದಾರೆ. ಆಡಳಿತಾರೂಢ ಎನ್‌ಡಿಪಿಪಿ-ಬಿಜೆಪಿ ಮೈತ್ರಿಕೂಟ ರಾಜ್ಯದಲ್ಲಿ ಮೂರು ಸ್ಥಾನಗಳನ್ನು ಗೆದ್ದು 35ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರವನ್ನು ಉಳಿಸಿಕೊಳ್ಳಲು ಸಜ್ಜಾಗಿದೆ.

ವೃತ್ತಿಯಲ್ಲಿ ವಕೀಲೆಯಾಗಿರುವ ಜಖಾಲು ಕಳೆದ ಎರಡು ದಶಕಗಳಿಂದ ಸರ್ಕಾರೇತರ ಸಂಸ್ಥೆ ಯೂತ್‌ನೆಟ್ ನಾಗಾಲ್ಯಾಂಡ್ ಎಂಬ ಎನ್.ಜಿ.ಒ ನಡೆಸುತ್ತಿದ್ದಾರೆ. ಈ ಮೂಲಕ ಅಧ್ಯಯನ ಮಾಡಲು ಬಯಸುವ ಸಾವಿರಾರು ಯುವಕರಿಗೆ ಸಹಾಯ ಮಾಡುತ್ತಿದ್ದಾರೆ.

ನಾಗಾಲ್ಯಾಂಡ್‌ನ 60 ವಿಧಾನಸಭಾ ಕ್ಷೇತ್ರಗಳ ಪೈಕಿ 59 ಕ್ಷೇತ್ರಗಳಲ್ಲಿ ಸೋಮವಾರ ವಿಧಾನಸಭೆ ಚುನಾವಣೆ ನಡೆದಿದ್ದು, 13.16 ಲಕ್ಷ ಮತದಾರರ ಪೈಕಿ ಶೇ.85.90ರಷ್ಟು ಮತದಾರರು ಮತ ಚಲಾಯಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top