ಪುತ್ತೂರು: ಸಂಪ್ಯ ಮಸೀದಿ ಮುಂಭಾಗದಲ್ಲಿ ಪೊಲೀಸ್ ಜೀಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.

ಮೃತಪಟ್ಟವರನ್ನು ಆರ್ಲಪದವು ಸಿಎ ಬ್ಯಾಂಕ್ ಮ್ಯಾನೇಜರ್ ಲಕ್ಷ್ಮಣ್ ನಾಯ್ಕ್ ಎಂದು ಗುರುತಿಸಲಾಗಿದೆ.
ಪುತ್ತೂರಿಗೆ ಆಗಮಿಸುತ್ತಿದ್ದ ಪೊಲೀಸ್ ಜೀಪ್ ಹಾಗೂ ಆರ್ಲಪದವು ಕಡೆ ಸಾಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೈಕ್ ಸವಾರ ಲಕ್ಷ್ಮಣ್ ನಾಯ್ಕ್ ಅವರು ಗಂಭೀರ ಗಾಯಗೊಂಡು, ಕೊನೆಯುಸಿರೆಳೆದರು. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.