ಪುತ್ತೂರು : ಅರಿಯಡ್ಕ ಗ್ರಾಮದ ನೂತನ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ನಡೆಯಿತು.
ಪುತ್ತೂರು ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಗ್ರಾಮ ಪಂಚಾಯಿತಿಗಳು ಸ್ಥಳೀಯ ಗ್ರಾಮಸ್ಥರ ಆಶೋತ್ತರಗಳನ್ನು ಈಡೇರಿಸುವ ಕೇಂದ್ರವಾಗಿದ್ದು, ಗ್ರಾಪಂ ಮೂಲಕ ಹಲವಾರು ಯೋಜನೆಗಳು ಜನಸಾಮಾನ್ಯರನ್ನು ತಪುಲುತ್ತಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಪಂಚಾಯತ್ ಅಧ್ಯಕ್ಷರು, ಸದಸ್ಯರುಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಹಾಗೂ ಊರ ಗ್ರಾಮಸ್ಥರು ಉಪಸ್ಥಿತರಿದ್ದರು.