ಪುತ್ತೂರು : ಮಂಗಳೂರಿನ ಕಂಕನಾಡಿ ಗರೋಡಿ ಬಳಿ ನ.19 ರಂದು ಆಟೋ ರಿಕ್ಷಾದಲ್ಲಿ ಬಾಂಬ್ ಸ್ಟೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡು ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯವರಿಗೆ ನೂತನ ಆಟೋ ರಿಕ್ಷಾ ಮತ್ತು ಬಿಜೆಪಿ ವತಿಯಿಂದ ಲಕ್ಷ ರೂ. ಚೆಕ್ ಹಸ್ತಾಂತರಿಸಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಆಟೋರಿಕ್ಷಾ ಹಸ್ತಾಂತರಿಸಿ ಮಾತನಾಡಿ, ಬಾಂಬ್ ಸ್ಟೋಟದ ಮೂಲಕ ಭಾರತ ದೇಶವನ್ನು ಇಸ್ಲಾಮಿಕ್ ರಾಷ್ಟ್ರ ಮಾಡುವ ಹುನ್ನಾರ ಬಯಲಾಗಿದ್ದು, ಎನ್ ಐಎ ಅಧಿಕಾರಿಗಳೇ ಬಹಿರಂಗಪಡಿಸಿದ್ದರು. ಕೃತ್ಯದ ಕುರಿತು ಅಪಹಾಸ್ಯ ಮಾಡಿದವರು ಸ್ಪೋಟಕ ಮಾಡಿದವರನ್ನು ಅಮಾಯಕರು ಎಂದು ಹೇಳಿದ್ದ ಕಾಂಗ್ರೆಸಿಗರು ಈಗ ಏನು ಹೇಳುತ್ತಾರೆ ಎಂದ ಅವರು, ತುಷ್ಠೀಕರಣದ ರಾಜಕೀಯವನ್ನು ಬಿಜೆಪಿ ಸಹಿಸುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಮುಡಾ ಅಧ್ಯಕ್ಷ ರವಿಶಂಕರ್, ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ ಸಂದೀಪ್ ಗರೋಡಿ, ಸುಧೀರ್ ಶೆಟ್ಟಿ, ಶರಣ್ ಪಂಪ್‍ವೆಲ್ ಮೊದಲಾದವರು ಉಪಸ್ಥಿತರಿದ್ದರು.