ರಾಹುಲ್‌ ಗಾಂಧಿಯನ್ನು ಮತ್ತೆ ಟೀಕಿಸಿದ ನಳಿನ್

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ಸನ್ನು ಟೀಕಿಸುವ ಭರದಲ್ಲಿ ಮತ್ತೊಮ್ಮೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕೊರೊನಾ ಲಸಿಕೆ ತೆಗೆದುಕೊಂಡರೆ ಮಕ್ಕಳಾಗುವುದಿಲ್ಲ ಎಂದು ವಿಪಕ್ಷ ನಾಯಕರು ಹೇಳಿಕೆ ನೀಡಿದ್ದರು. ಬಳಿಕ ಅವರೇ ರಹಸ್ಯವಾಗಿ ಹೋಗಿ ತೆಗೆದುಕೊಂಡರು ಎಂದು ನಳಿನ್‌ ಕುಮಾರ್ ಕಟೀಲ್ ಟಾಂಗ್ ಕೊಟ್ಟಿದ್ದಾರೆ.
ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಡಿ, ಹಾಕಿಸಿಕೊಂಡರೆ ಮಕ್ಕಳಾಗುವುದಿಲ್ಲ ಎಂದು ಜನರಿಗೆ ಹೇಳಿದರು. ಅದು ಬಂಜೆತನಕ್ಕೆ ಕಾರಣವಾಗುತ್ತದೆ ಎಂದು ಪ್ರಚಾರ ಮಾಡಿದರು. ಆದರೆ ಅವರೇ ಅದನ್ನು ರಹಸ್ಯವಾಗಿ ತೆಗೆದುಕೊಂಡರು. ಲಸಿಕೆ ತೆಗೆದುಕೊಂಡಿದ್ದರಿಂದ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ. ಏಕೆಂದರೆ ಅವರಿಗೆ ಮಕ್ಕಳಾಗುವುದಿಲ್ಲ ಎಂದು ಬಿಜೆಪಿ ಕಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಳೆದ ತಿಂಗಳು ಇಟಲಿಯ ದಿನಪತ್ರಿಕೆ ‘ಕೊರಿಯರ್ ಡೆಲ್ಲಾ ಸೆರಾ’ಕ್ಕೆ ನೀಡಿದ ಸಂದರ್ಶನದಲ್ಲಿ ರಾಹುಲ್ ಗಾಂಧಿ ಅವರು ತಮ್ಮ ಮದುವೆ ಕುರಿತಂತೆ ಪ್ರಶ್ನೆ ಎದುರಿಸಿದ್ದರು. ಮದುವೆ ಬಗ್ಗೆ ಸ್ಪಷ್ಟವಾಗಿ ಹೇಳದೆ ಹೋದರೂ ಅವರು ತಮಗೆ ಮಕ್ಕಳನ್ನು ಹೊಂದುವ ಬಯಕೆ ಇದೆ ಎಂದು ಹೇಳಿಕೊಂಡಿದ್ದಾರೆ. ನೀವು ಇದುವರೆಗೂ ಏಕೆ ಮದುವೆಯಾಗಿಲ್ಲ ಎಂಬ ಪ್ರಶ್ನೆಗೆ ರಾಹುಲ್, ಇದು ಬಹಳ ವಿಚಿತ್ರ… ನನಗೂ ಗೊತ್ತಿಲ್ಲ. ಅನೇಕ ಕೆಲಸಗಳನ್ನು ಮಾಡಬೇಕಿದೆ. ಆದರೆ ನನಗೆ ಮಕ್ಕಳನ್ನು ಪಡೆಯುವ ಬಯಕೆ ಇದೆ ಎಂದು ಹೇಳಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top