ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಣಿ ಅಭಿಯಾನ ಕಾರ್ಯಕ್ರಮವು ನಡೆಯಿತು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ವಿಭಾಗದ ನಿರ್ದೇಶಕರಾದ ಡಾ. ಬಿ.ಕೆ. ರವೀಂದ್ರ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಬನ್ನೂರು ಗ್ರಾಮ ಒನ್ ಕೇಂದ್ರದ ಅಶೋಕ್ ಮಾತನಾಡಿ, ಆಯುಷ್ಮಾನ್ ಕಾರ್ಡ್ ಮಾಡುವ ವಿಧಾನ, ಅದರಿಂದಾಗುವ ಉಪಯೋಗಗಳೇನು ಎಂಬುದನ್ನು ವಿವರಿಸಿದ್ದಾರೆ. ಜೊತೆಗೆ ಬಡವರಿಗೆ ಆಧಾರ ಸ್ಥಂಭದಂತಿರುವ ಈ ಆಯುಷ್ಮಾನ್ ಭಾರತ್ ನ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ ಅಕ್ಷತಾ ಎ. ಪಿ. ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳು ನಾಗರಿಕರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬಡವರಿಗೂ ವೈದ್ಯಕೀಯ ನೆರವು ಸಿಗಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆ ರೂಪಿಸಿ ಜಾರಿಗೊಳಿಸಿದ್ದು, ಇದರ ಕುರಿತ ಮಾಹಿತಿ ಪ್ರತಿಯೊಬ್ಬ ಪ್ರಜೆಗೊ ದೊರೆಯಬೇಕು. ಜೊತೆಗೆ ಪ್ರತಿಯೊಬ್ಬರು ಅದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು. ಜೊತೆಗೆ ವಿದ್ಯಾರ್ಥಿಗಳು ಈ ಅಭಿಯಾನದ ಮಾಹಿತಿಯನ್ನು ಗ್ರಾಮದ ಪ್ರತಿಯೊಬ್ಬ ವ್ಯಕ್ತಿಗೂ ತಲುಪಿಸುವ ಪ್ರಯತ್ನವನ್ನು ಕಾನೂನು ವಿದ್ಯಾರ್ಥಿಗಳು ಮಾಡಬೇಕು ಎಂದರು.
ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್ ಎಸ್ ಎಸ್ ಘಟಕದ ಸಂಯೋಜಕ ಹಾಗೂ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಲಕ್ಷ್ಮೀಕಾಂತ ಎ. ಪ್ರಾಸ್ತವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ದತ್ತು ಗ್ರಾಮವಾದ ಶಾಂತಿಗೋಡಿನ ಪ್ರತಿನಿಧಿ ಶ್ರೀಕೃಷ್ಣ, ಸ್ವಾತಿ ಮಣಿಯ, ಗ್ರಾಮ ಒನ್ ಪ್ರತಿನಿಧಿ ಅಶ್ಮಿತಾ ನಾಯಕ್ ಕೊಡಿಂಬಾಡಿ ಉಪಸ್ಥಿತರಿದ್ದರು. ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿ ಸಂಯೋಜಕಿ ವೃಂದಾ ಸ್ವಾಗತಿಸಿ, ಎನ್ ಎಸ್ ಎಸ್ ಸ್ವಯಂಸೇವಕ ನವನೀತ್ ಡಿ ಕೆ ವಂದಿಸಿದರು. ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿ ಸಂಯೋಜಕ ಕೌಶಿಕ್ ಜೆ ಕಾರ್ಯಕ್ರಮ ನಿರೂಪಿಸಿದರು.