ಪುತ್ತೂರು : ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ.ಈ ಹಿನ್ನಲೆಯಲ್ಲಿ ಜಿಲ್ಲೆ ಸೇರಿದಂತೆ ತಾಲೂಕಿನಲ್ಲಿ ಪ್ರತೀ ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆಗಳು ನಡೆದಿದೆ.
ಮಾ.9 ರಿಂದ 29 ರ ತನಕ ಪರೀಕ್ಷೆ ನಡೆಯಲಿದ್ದು, ಮೌಲ್ಯ ನಿರ್ಣಯ ಮಂಡಳಿ ನಿರ್ದೇಶನದಂತೆ ಜಿಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ.
ದ.ಕ.ಜಿಲ್ಲೆಯಲ್ಲಿ ಹೊಸ ವಿದ್ಯಾರ್ಥಿಗಳು, ಖಾಸಗಿ ಹಾಗೂ ಪುನರಾವರ್ತಿ ಅಭ್ಯರ್ಥಿಗಳು ಸೇರಿದಂತೆ 34,340 ಮಂದಿ ಪರೀಕ್ಷೆಗೆ ನೋಂದಾವಣೆ ಮಾಡಿಕೊಂಡಿದ್ದು, ಪರೀಕ್ಷೆ ಬರೆಯಲಿದ್ದಾರೆ. ದ.ಕ.ಜಿಲ್ಲೆಯಲ್ಲಿ ಒಟ್ಟು 52 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ ಅಗತ್ಯ ಭದ್ರತೆ ಒದಗಿಸಲಾಗಿದೆ.
ಪ್ರತೀ ವರ್ಷ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸಲಾಗುತ್ತಿತ್ತು. ಈ ವರ್ಷ ರಾಜ್ಯ ಸರಕಾರ ಮಹತ್ದದ ನಿರ್ಧಾರ ಕೈಗೊಂಡು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಹಾಗೂ ಪಿಯು ಬೋರ್ಡ್ನ್ ನ್ನು ವಿಲೀನ ಮಾಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯನ್ನು ರಚಿಸಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.
ನಕಲು ಹಾಗೂ ಅಕ್ರಮ ತಡೆಯುವ ನಿಟ್ಟಿನಲ್ಲಿ ಪ್ರತೀ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸಲಾಗಿದೆ. ವಿದ್ಯಾರ್ಥಿಗಳಿಗೆ, ಕೊಠಡಿ ಮೇಲ್ವಿಚಾರಕರಿಗೆ, ವಿಚಕ್ಷಣ ದಳದ ಅಧಿಕಾರಿ ಸಿಬ್ಬಂದಿಗಳಿಗೆ ಪತ್ಯೇಕ ಮಾರ್ಗ ಸೂಚಿಗಳನ್ನು ಹೊರಡಿಸಲಾಗಿದೆ. ಮೊಬೈಲ್ ಹಾಗೂ ಇನ್ನಿತರ ಎಲೆಕ್ಟ್ರಾನಿಕ್ಸ್ ಪರಿಕರಗಳನ್ನು ಪೂರ್ಣ ಪ್ರಮಾಣದಲ್ಲಿ ನಿಷೇಧಿಸಲಾಗಿದೆ.
ಈ ಬಾರಿ ಪರೀಕ್ಷೆ ಬರೆಯು ಎಲ್ಲಾ ವಿದ್ಯಾರ್ಥಿಗಳಿಗೆ ನಮ್ಮೆಲ್ಲರ ಶುಭ ಹಾರೈಕೆಯಿರಲಿ