ಬೆಂಗಳೂರು : ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಸಿಗರೇಟ್ ಸೇದಿದ ಯುವತಿಯೊಬ್ಬಳನ್ನು ವಾಯುಯಾನ ಸುರಕ್ಷಾ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಬಂಧಿಸಲಾಗಿದೆ.
ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಶೌಚಾಲಯದಲ್ಲಿ ಸೇದಿದ್ದಳು. ಆಕೆಯನ್ನು ಭಾನುವಾರ ತಡರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳದ ಸೀಲ್ದಾ ಜಿಲ್ಲೆಯ ಪ್ರಿಯಾಂಕಾ ಚಕ್ರವರ್ತಿ ಭಾನುವಾರ ತಡರಾತ್ರಿ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇದಿದ್ದಾಳೆ. ವಿಮಾನವು ಕೋಲ್ಕತ್ತಾದಿಂದ ರಾತ್ರಿ 9.50 ಕ್ಕೆ ಹೊರಟು ತಡರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರು ತಲುಪಿದೆ.
ವಿಮಾನ ಲ್ಯಾಂಡ್ ಆಗುವ 30 ನಿಮಿಷ ಮೊದಲು ಪ್ರಿಯಾಂಕಾ ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾಳೆ. ಪ್ರಿಯಾಂಕಾ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದಾಳೆ ಎಂದು ಶಂಕಿಸಿದ ವಿಮಾನ ಸಿಬ್ಬಂದಿ ಆಕೆಯನ್ನು ಬಾಗಿಲು ತೆರೆಯುವಂತೆ ಕೇಳಿದ್ದಾರೆ. ಶೌಚಾಲಯದ ಡಸ್ಟ್ಬಿನ್ನಲ್ಲಿ ಸಿಗರೇಟ್ ಪತ್ತೆಯಾಗಿದೆ. ಬಳಿಕ ಸಿಬ್ಬಂದಿ ಡಸ್ಟ್ಬಿನ್ಗೆ ನೀರು ಸುರಿದಿದ್ದಾರೆ. ವಿಮಾನ ಲ್ಯಾಂಡ್ ಆದ ಕೂಡಲೇ ಸಿಬ್ಬಂದಿ ಪ್ರಿಯಾಂಕಾಳನ್ನು ವಿಮಾನ ನಿಲ್ದಾಣದ ಭದ್ರತಾ ವಿಭಾಗಕ್ಕೆ ಒಪ್ಪಿಸಿದ್ದಾರೆ.