ಪುತ್ತೂರು : ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ಇವರ ಸಹಕಾರದಲ್ಲಿ ಪುತ್ತೂರು ತಾಲೂಕು ಬಂಟರ ಸಂಘ ಹಾಗೂ ಮಹಿಳಾ ಸಂಘದ ಜಂಟಿ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮಾ.12 ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ ಎಂದು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದ್ದಾರೆ.
ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಬೆಳಿಗ್ಗೆ 9 ಗಂಟೆಗೆ ನಡೆಯುವ ಮಹಿಳಾ ದಿನಾಚರಣೆ “ಮಹಿಳಾ ಬಂಟ ಸಂಭ್ರಮ”ವನ್ನು ಪುತ್ತೂರು ಪದ್ಮಾ ಸೋಲಾರ್ ನ ಲತಾ ಪಿ. ಶೆಟ್ಟಿ ಉದ್ಘಾಟಿಸಲಿದ್ದು, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಸಬಿತಾ ಭಂಡಾರಿ ಅಧ್ಯಕ್ಷತೆ ವಹಿಸುವರು. ಉಪನ್ಯಾಸಕಿ, ಆಕಾಶವಾಗಿ ಉದ್ಘೋಷಕಿ ಸಿದ್ದಕಟ್ಟೆ ಮಲ್ಲಿಕಾ ಅಜಿತ್ ಶೆಟ್ಟಿ ಆಶಯ ಮಾತುಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ಮಹಿಳಾ ಬಂಟರ ಸಂಘದ ಗೌರವಾಧ್ಯಕ್ಷೆ ಮಲ್ಲಿಕಾ ಪ್ರಸಾದ್, ಮಾಜಿ ಉಪಾಧ್ಯಕ್ಷೆ ರಮಾಕಾಂತಿ ಎ.ಕೆ.ರೈ ಪಾಲ್ಗೊಳ್ಳುವರು. ಈ ಸಂದರ್ಭದಲ್ಲಿ ರಾಜ್ಯ ಪುರಸ್ಕೃತ ಕ್ರೀಡಾಪಟು ಡಾ.ಆಶಾ ಶಂಕರ್ ಭಂಡಾರಿ ಡಿಂಬ್ರಿ, ಬಿ.ವೆಲ್ ಫಾರ್ಮ್ ನ ಸಿಇಒ ಡಾ.ಅನಿಲ ದೀಪಕ್ ಶೆಟ್ಟಿ ಬನ್ನೂರು ಹಾಗೂ ಬನ್ನೂರು ಸಿಎ ಬ್ಯಾಂಕ್ ಸಿಇಒ ರಾಧಾ ಬಿ.ರೈ ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.
ಬೆಳಿಗ್ಗೆ 11.30 ಕ್ಕೆ ನಡೆಯುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ಉದ್ಘಾಟಿಸಲಿದ್ದು, ಪುತ್ತೂರು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸುವರು. ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಸನ್ಮಾನಿಸುವರು. ಮುಖ್ಯ ಅತಿಥಿಗಳಾಗಿ ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಉದ್ಯಮಿ ಚಿಕ್ಕಪ್ಪ ನಾಯ್ಕ್, ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆ, ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ದಂಬೆಕಾನ ಸದಾಶಿವ ರೈ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿ ಶೆಟ್ಟಿ ಮೂಡಂಬೈಲು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಜಯರಾಮ ರೈ ಮಿತ್ರಂಪಾಡಿ ಹಾಗೂ ಹೊಸಮನೆ ಗಂಗಾಧರ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿ, ಕೋಶಾಧಿಕಾರಿ ಕೃಷ್ಣಪ್ರಸಾದ್ ಆಳ್ವ, ಮಹಿಳಾ ಸಂಘದ ಅಧ್ಯಕ್ಷೆ ಸಬಿತಾ ಭಂಡಾರಿ ಉಪಸ್ಥಿತರಿದ್ದರು.