ಪುತ್ತೂರು: ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಗಳಿಸಿರುವ ಹಿನ್ನೆಲೆಯಲ್ಲಿ ಗುರುವಾರ ಪುತ್ತೂರು ಬಿಜೆಪಿ ಕಛೇರಿ ಬಳಿ ವಿಜಯೋತ್ಸವ ಆಚರಿಸಲಾಯಿತು.
ಬಿಜೆಪಿ ಪ್ರಮುಖರು, ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಸಂಭ್ರಮ ಆಚರಿಸಿದರು.

ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಕರಾವಳಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಬಿಜೆಪಿ ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಪುತ್ತೂರು ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.