ಪ್ರಫುಲ್ಲಾ ಗಣೇಶ್ ರವರಿಗೆ “ವಿದ್ಯಾದಾಯಿನಿ” ಬಿರುದು ಪ್ರಧಾನ

ಪುತ್ತೂರು: ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ವಿಶಿಷ್ಟ ಸಾಧನೆಗೆ ಪುತ್ತೂರಿನ ಐಆರ್ ಸಿ ಎಂಡಿ ಶಿಕ್ಷಣ  ಸಂಸ್ಥೆಯ ನಿರ್ದೇಶಕಿ ಪ್ರಫುಲ್ಲಾ ಗಣೇಶ್ ರವರಿಗೆ  ದ.ಕ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು,  ಶ್ರೀ ಬ್ರಹ್ಮ ಬೈದ್ಯರ್ಕಳ ಗರಡಿಯಲ್ಲಿ ಕ್ಷೇತ್ರಕ್ಕೆ 150 ವರ್ಷಗಳು ತುಂಬಿದ ಪ್ರಯುಕ್ತಆಯೋಜಿಸಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ “ವಿದ್ಯಾದಾಯಿನಿ” ಬಿರುದು ಪ್ರಧಾನ  ಮಾಡಿ ಗೌರವಿಸಲಾಯಿತು.

ಪ್ರಫುಲ್ಲಾ ಗಣೇಶ್ ರವರು  ದಕ್ಷಿಣ ಕನ್ನಡ ಮತ್ತು ಇತರರ  ಜಿಲ್ಲೆಯ 62 ವಿವಿಧ ಕಾಲೇಜುಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ  “Maths Shortcut Tricks and Tips”  ಕುರಿತು ಉಚಿತ ಕಾರ್ಯಾಗಾರ ಗಳನ್ನು ನಡೆಸಿರುತ್ತಾರೆ. ಸರ್ಕಾರಿ ಪ್ರಾಥಮಿಕ ಶಾಲೆಗೆ ಉಚಿತವಾಗಿ ಅಬಾಕಸ್ ತರಬೇತಿ, ಅನೇಕ ಯೂನಿವೆರ್ಸಿಟಿಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿ ನೀಡಿ, ಪದವಿ ಮತ್ತು ಸ್ನಾತಕೋತ್ತರ ಪದವಿ  ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಭೇದಿಸುವ ಹಲವಾರು ವಿಷಯಗಳ ಬಗ್ಗೆ ತರಬೇತಿ ನೀಡುತ್ತಿರುವ ಅವರು ಕೊರೊನ ಸಮಯದಲ್ಲಿ ಕರ್ನಾಟಕ ಸರ್ಕಾರದ  ಯುವ ಸಬಲೀಕರಣ ಇಲಾಖೆಯ ಸಹಭಾಗಿತ್ವದಲ್ಲಿ ಪದವಿ ವಿದ್ಯಾರ್ಥಿಗಳಿಗೆ  ಆನ್ಲೈನ್ ಮೂಲಕ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿಯನ್ನು ನೀಡಿರುತ್ತಾರೆ, ಉದ್ಯೋಗಾಕಾಂಕ್ಷಿಗಳಿಗೆ ನಿರಂತರ ಉದ್ಯೋಗ ಮಾಹಿತಿ ಮತ್ತು ಉದ್ಯೋಗದ ಹಾದಿ ತೋರಿಸಿರುತ್ತಾರೆ.

ಹಿರಿಯ ಸಾಹಿತಿ ಇರಾ ನೇಮು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪತ್ರಕರ್ತ ಗಣೇಶ್ ಪ್ರಸಾದ್ ಪಾಂಡೇಲು, ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರ ಜಯಾನಂದ ಅಂಚನ್, ಕಾಸರಗೋಡು ಜಿಲ್ಲಾ ಚುಸಾಪ ಅಧ್ಯಕ್ಷ ಶಿವರಾಮ ಕಾಸರಗೋಡು, ಸತ್ಯ ಶಾಂತ ಪ್ರತಿಷ್ಠಾನದ ಅಧ್ಯಕ್ಷೆ ಶಾಂತಾ ಕುಂಟಿನಿ, ಕಂಕನಾಡಿ ಬ್ರಹ್ಮ ಬೈದ್ಯರ್ಕಳ ಗರೋಡಿ ಕ್ಷೇತ್ರದ ಮೊಕ್ತೇಸರ ಜೆ ದಿನೇಶ್ ಅಂಚನ್, ಯುವ ವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕುಸುಮಕರ ಕುಂಪಲ, ಶ್ರೀ ಗೋಕರ್ಣ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.,  ಬಿಲ್ಲವ ಮಹಾ ಮಂಡಲದ ಉಪಾಧ್ಯಕ್ಷ ಸೂರ್ಯಕಾಂತ್ ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ. ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು ಸ್ವಾಗತಿಸಿದರು. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಾ.ವೀ. ಕೃಷ್ಣದಾಸ್ ವಂದಿಸಿದರು . ಲತೀಶ್ ಸಂಕೊಳಿಗೆ,ವ. ಉಮೇಶ್ ಕಾರಂತ್, ಅರ್ಚನಾ ಎಂ ಕುಂಪಲ ನಿರೂಪಿಸಿದರು































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top