ಪುತ್ತೂರು: ಶನಿವಾರ ಸಂಜೆ ಪುತ್ತೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ ರದ್ದಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವ ನಾರಾಯಣ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಕಾಂಗ್ರೆಸಿನ ಪ್ರಕಟಣೆ ತಿಳಿಸಿದೆ.
ಕಾಂಗ್ರೆಸಿನ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಗೃಹಲಕ್ಷ್ಮೀ ಯೋಜನೆ ಸೇರಿದಂತೆ ಹಲವು ಯೋಜನೆಗಳ ಪ್ರಚಾರಾರ್ಥವಾಗಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದೀಗ ಕಾರ್ಯಕ್ರಮ ರದ್ದಾಗಿರುವ ಹಿನ್ನೆಲೆಯಲ್ಲಿ, ಕಾರ್ಯಕ್ರಮವನ್ನು ಅಜೆಂಡಾವನ್ನು ಪ್ರತಿ ಮನೆಮನೆಗೆ ತಲುಪಿಸುವಂತೆ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.