ಪುತ್ತೂರು: ಹತ್ತೂರಿನ ಜನರು ತದೇಕಚಿತ್ತದಿಂದ ವೀಕ್ಷಿಸುವ ಪುತ್ತೂರು ಜಾತ್ರೆಯ ಆಮಂತ್ರಣ ಪತ್ರ ಮಾರ್ಚ್ 11ರಂದು ಬೆಳಿಗ್ಗೆ ಶಾಸಕ ಸಂಜೀವ ಮಠಂದೂರು ಬಿಡುಗಡೆಗೊಳಿಸಿದರು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಒಳಾಂಗಣದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ, ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಲಾಯಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಆಡಳಿತಾಧಿಕಾರಿ ನವೀನ್ ಭಂಡಾರಿ, ಗೌರಿ ಬನ್ನೂರು, ಪಿ.ಜಿ. ಜಗನ್ನೀವಾಸ್ ರಾವ್, ರಾಜೇಶ್ ಬನ್ನೂರು, ಐತ್ತಪ್ಪ ನಾಯ್ಕ್, ವೀಣಾ ಆಚಾರ್ಯ, ಗೌರಿ ಬನ್ನೂರು, ದೀಕ್ಷಾ ಪೈ, ಸಾಜಾ ರಾಧಾಕೃಷ್ಣ ಆಳ್ವ, ಶೇಖರ್ ನಾರಾವಿ, ಸೂತ್ರಬೆಟ್ಟು ಜಗನ್ನಾಥ್ ರೈ, ರವೀಂದ್ರನಾಥ್ ರೈ ಬಳ್ಳಮಜಲು ಮೊದಲಾದವರು ಉಪಸ್ಥಿತರಿದ್ದರು.