ಪುತ್ತೂರು : ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳೀ ದೇವಸ್ಥಾನದ ಆರಾಟ ಮಹೋತ್ಸವದ ಪ್ರಯುಕ್ತ ಉಪ್ಪಿನಂಗಡಿ ಗೆಳೆಯರು-94 ವತಿಯಿಂದ ಕೇರಳ ಹಾಗೂ ಕರ್ನಾಟಕದ ಖ್ಯಾತ ಕಲಾವಿದರಿಂದ ಸಂಗೀತ ಗಾನ ಸಂಭ್ರಮ ಹಾಗೂ ಗೆಳೆಯರು-94 ಬೇಡಿಕೆಯಂತೆ ಹಳೆ ಬಸ್ ನಿಲ್ದಾಣಕ್ಕೆ ಅಳವಡಿಸಿದ ಇಂಟರ್ ಲಾಕ್ ಉದ್ಘಾಟನೆ ಶುಕ್ರವಾರ ನಡೆಯಿತು.
ಶಾಸಕ ಸಂಜೀವ ಮಠಂದೂರು ಇಂಟರ್ ಲಾಕ್ ಉದ್ಘಾಟನೆ ನೆರವೇರಿಸಿ ಮಾತನಾಡಿ, ಉಪ್ಪಿನಂಗಡಿ ಹಳೆ ಬಸ್ ನಿಲ್ದಾಣ ದುಸ್ಥಿತಿಗೆ ಬರಬಾರದು ಎಂಬ ನಿಟ್ಟಿನಲ್ಲಿ ಶಾಸಕರ ಅನುದಾನದಿಂದ ಇಂಟರ್ ಲಾಕ್ ಅಳವಡಿಸುವ ಮೂಲಕ ಅಭಿವೃದ್ಧಿ ಪಡಿಸಲಾಗಿದೆ. ಗುಂಡಿ ಬಿದ್ದ ರಸ್ತೆ ಇರಬಾರದು ಎಂಬ ದೃಷ್ಟಿಯಿಂದ ಮರು ಡಾಮರೀಕರಣ ಮಾಡಲಾಗಿದದೆ. ಈ ಮೂಲಕ ಉಪ್ಪಿನಂಗಡಿ ನಗರ ಇಂದು ಕಂಗೊಳಿಸುತಿದೆ. ಜತೆಗೆ ಹಿಂದೂ ಶ್ರದ್ಧಾ ಕೇಂದ್ರಗಳಿಗೆ ಅನುದಾನ ನೀಡುವ ಕೆಲಸ ಆಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕರನ್ನು ಉಪ್ಪಿನಂಗಡಿ ರಿಕ್ಷಾ ಚಾಲಕ-ಮಾಲಕರ ಸಂಘ, ಜೀಪು ಚಾಲಕ-ಮಾಲಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಉಪ್ಪಿನಂಗಡಿ ಪಂಚಾಯಿತಿ ಅಧ್ಯಕ್ಷೆ ಉಷಾ ಚಂದ್ರ ಮುಳಿಯ, ದೇವಸ್ಥಾನ್ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ, ದಾಸಪ್ಪಗೌಡ, , ಗುಣಾಕಾರ ಅಗ್ನಡಿ, ಚಂದ್ರ ಶೇಖರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.