ಪುತ್ತೂರು: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಪುತ್ತೂರಿಗೆ ಆಗಮಿಸಿದ್ದು, ಪುತ್ತೂರು ಬಸ್ ನಿಲ್ದಾಣದಿಂದ ವೆಂಕಟ್ರಮಣ ದೇವಳದವರೆಗೆ ಮೆರವಣಿಗೆಯಲ್ಲಿ ಸಾಗಿ ಬರಲಾಯಿತು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಸಕ ಸಂಜೀವ ಮಠಂದೂರು ಅವರು, ರಾಜ್ಯ, ರಾಷ್ಟ್ರದ ಅಭಿವೃದ್ಧಿ ಕಾರ್ಯಗಳಿಗೆ ಡಬಲ್ ಇಂಜಿನ್ ಸರ್ಕಾರವೇ ಕಾರಣ. ಆದ್ದರಿಂದ ಜನತೆ ಬಿಜೆಪಿ ಸರ್ಕಾರದ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದರು.
ಶಾಸಕ ಸಂಜೀವ ಮಠಂದೂರು ಅವರ ಪ್ರಾಸ್ತಾವಿಕ ಮಾತಿನ ಪೂರ್ಣ ವಿವರ ಈ ವೀಡಿಯೋನಲ್ಲಿದೆ…
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್, ಸಂಚಾಲಕ ದತ್ತಾತ್ರೇಯ, ಸಹಸಂಚಾಲಕ ಕಿಶೋರ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಉದಯ್ ಕುಮಾರ್ ಶೆಟ್ಟಿ, ಗೋಪಾಲಕೃಷ್ಣ ಹೇರಳೆ, ಚನಿಲ ತಿಮ್ಮಪ್ಪ ಶೆಟ್ಟಿ, ಪಿ.ಜಿ. ಜಗನ್ನಿವಾಸ್ ರಾವ್, ರಾಜೇಶ್ ಕಾವೇರಿ, ರಾಮ್ ದಾಸ್ ಬಂಟ್ವಾಳ, ಭಾಮಿ ಅಶೋಕ್ ಶೆಣೈ, ದೇವದಾಸ್ ಶೆಟ್ಟಿ, ಕಸ್ತೂರಿ ಪಂಜ, ಬೂಡಿಯಾರ್ ರಾಧಾಕೃಷ್ಣ ರೈ, ಆರ್.ಸಿ. ನಾರಾಯಣ್, ವಿದ್ಯಾಗೌರಿ, ಸುನಿಲ್ ದಡ್ಡು, ಮಲ್ಲಿಕಾ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು. ನಗರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಸ್ವಾಗತಿಸಿದರು.