ರಾಷ್ಟ್ರದ ಬೆಳವಣಿಗೆಯನ್ನು ನೋಡುವುದರಲ್ಲಿ ಯುವಕರು ಅಪಾರ ಹೆಮ್ಮೆ ಪಡುತ್ತಿದ್ದಾರೆ: ಪ್ರಧಾನಿ ಮೋದಿ

ಮಂಡ್ಯ: ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಪಾಲ್ಗೊಂಡು ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ ಕೆಲವು ದಿನಗಳಿಂದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ನಮ್ಮ ರಾಷ್ಟ್ರದ ಬೆಳವಣಿಗೆಯನ್ನು ನೋಡುವುದರಲ್ಲಿ ಯುವಕರು ಅಪಾರ ಹೆಮ್ಮೆ ಪಡುತ್ತಿದ್ದಾರೆ. ಈ ಎಲ್ಲಾ ಯೋಜನೆಗಳು ಸಮೃದ್ಧಿ ಮತ್ತು ಅಭಿವೃದ್ಧಿಯ ಹಾದಿಗಳನ್ನು ತೆರೆಯುತ್ತದೆ ಎಂದು ಹೇಳಿದರು

ಕನ್ನಡದಲ್ಲೇ ಭಾಷಣ ಆರಂಭಿಸಿದ ಅವರು, ‘ತಾಯಿ ಭುವನೇಶ್ವರಿಗೆ ನಮಸ್ಕಾರಗಳು. ನಿಮ್ಮ ಪ್ರೀತಿಯ ಋಣ ಬಡ್ಡಿ ಸಮೇತ ನಮ್ಮ ಸರ್ಕಾರ ತೀರಿಸಲಿದೆ. ಕಳೆದ ಕೆಲವು ದಿನಗಳಿಂದ ಹೆದ್ದಾರಿ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಸಾಮಾಜಿಕ ಜಾಲತಾಣದಲ್ಲೂ ದಶಪಥ ಹೆದ್ದಾರಿ ಬಗ್ಗೆ ಚರ್ಚೆ ಆಗುತ್ತಿದೆ. ಮೈಸೂರು-ಬೆಂಗಳೂರು ಹೆದ್ದಾರಿಯ ಫೋಟೋಗಳು ವೈರಲ್​ ಆಗಿವೆ. ಮೈಸೂರು-ಕುಶಾಲನಗರ 4 ಪಥದ ರಸ್ತೆಗೆ ಶಿಲಾನ್ಯಾಸ ನೆರವೇರಿಸಿದ್ದೇವೆ. ದಶಪಥ ಹೆದ್ದಾರಿಯಿಂದ ಈ ಭಾಗದಲ್ಲಿ ಸಾಕಷ್ಟು ಅನುಕೂಲವಾಗಲಿದೆ. ಈ ಪುಣ್ಯಭೂಮಿ ಕೃಷ್ಣರಾಜ ಒಡೆಯರ್, ವಿಶ್ವೇಶ್ವರಯ್ಯರನ್ನು ದೇಶಕ್ಕೆ ನೀಡಿದೆ. ಇಂದು ಭಾರತ ಸಾಕಷ್ಟು ಬದಲಾವಣೆ ಆಗುತ್ತಿದೆ. ಭಾರತ ಮಾಲಾ, ಸಾಗರ ಮಾಲಾ ಯೋಜನೆಯಿಂದ ದೇಶ ಅಭಿವೃದ್ಧಿ. ಮೂಲಭೂತ ಕ್ಷೇತ್ರದಲ್ಲಿ ಡಬಲ್​ ಇಂಜಿನ್​ ಸರ್ಕಾರದಿಂದ ಬದಲಾವಣೆ’ ಎಂದರು.
ಮೋದಿಯವರು 4128.92 ಕೋಟಿ ವೆಚ್ಚದ 92.33 ಕಿ.ಮೀ. ಉದ್ದದ ಹೆದ್ದಾರಿ ಕಾಮಗಾರಿಗೆ ಗೆಜ್ಜಲಗೆರೆ ಕಾಲೋನಿನ ಸಮಾವೇಶದಲ್ಲಿ ಶಿಲಾನ್ಯಾಸ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಶಿ, ಸಂಸದರಾದ ಪ್ರತಾಪ್ ಸಿಂಹ, ಸುಮಲತಾ, ಸಚಿವರಾದ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣಗೌಡ, ಎಸ್.ಟಿ.ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು

ಒಂದು ವರ್ಷದಲ್ಲಿ ಕರ್ನಾಟಕಕ್ಕೆ 1 ಲಕ್ಷ ಕೋಟಿಗೂ ಅಧಿಕ ಹಣ ಬಿಡುಗಡೆ
ಕೆಲವು ಸಮಯಗಳಿಂದ ಕರ್ನಾಟಕದ ಬೇರೆ ಬೇರೆ ಪ್ರದೇಶದ ಜನತಾ ದರ್ಶನ ಮಾಡುವ ಅವಕಾಶ ಲಭಿಸಿದೆ. ಪ್ರತಿ ಸ್ಥಳದಲ್ಲೂ ಕರ್ನಾಟಕ ಜನತೆ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಅದರಲ್ಲೂ ಮಂಡ್ಯ ಜನರ ಆಶೀರ್ವಾದದ ಸವಿಯು ಮಾಧುರ್ಯದಿಂದ ಕೂಡಿದೆ. ಮೂಲಸೌಕರ್ಯ ತನ್ನೊಂದಿಗೆ ಸೌಕರ್ಯವನ್ನಷ್ಟೇ ಅಲ್ಲ, ಉದ್ಯೋಗ, ವಸತಿ, ಗಳಿಕೆಯ ಹಾದಿಯನ್ನು ತರುತ್ತದೆ. ಕೇಂದ್ರವು ಒಂದು ವರ್ಷದಲ್ಲಿ ಕರ್ನಾಟಕಕ್ಕೆ 1 ಲಕ್ಷ ಕೋಟಿಗೂ ಅಧಿಕ ಹಣ ಬಿಡುಗಡೆ ಮಾಡಿದೆ. ಬೆಂಗಳೂರು ತಂತ್ರಜ್ಞಾನಕ್ಕೆ ಪರಿಚಿತವಾದರೆ, ಮೈಸೂರು ತನ್ನ ಸಂಸ್ಕೃತಿಯ ಕಾರಣಕ್ಕೆ ಲೋಕ ಪರಿಚಿತ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top