ಗುಡಿಸಲಿಗೆ ಬೆಂಕಿ : ಮೂವರು ಮಕ್ಕಳು, ತಂದೆ-ತಾಯಿ ಸಜೀವ ದಹನ

ನಸುಕಿನ ಹೊತ್ತು ನಿದ್ದೆಯಲ್ಲಿರುವಾಗ ನಡೆದ ದುರ್ಘಟನೆ

ಲಖನೌ : ಉತ್ತರ ಪ್ರದೇಶದ ಕಾನ್ಪುರದ ದೇಹತ್‌ ಎಂಬಲ್ಲಿ ಇಂದು ನಸುಕಿನ ಹೊತ್ತು ಗುಡಿಸಲಿಗೆ ಬೆಂಕಿ ಹತ್ತಿಕೊಂಡು ಮೂವರು ಮಕ್ಕಳು ಸೇರಿ ಐವರು ಸಜೀವ ದಹನಗೊಂಡ ದಾರುಣ ಘಟನೆ ಸಂಭವಿಸಿದೆ. ರೂರಾ ಪೊಲೀಸ್ ಠಾಣಾ ವ್ಯಾಪ್ತಿಯ ಹರ್ಮೌ ಬಂಜಾರದೇರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸತೀಶ್ ಕುಮಾರ್, ಅವರ ಪತ್ನಿ ಕಾಜಲ್ ಮತ್ತು ಅವರ ಮೂವರು ಮಕ್ಕಳು ನಿದ್ದೆಯಲ್ಲಿದ್ದಾಗ ಗುಡಿಸಲಿಗೆ ಬೆಂಕಿ ಹತ್ತಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ದುರಂತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಎಲ್ಲರೂ ಸಜೀವ ದಹನವಾಗಿದ್ದಾರೆ.
ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಅಗ್ನಿಶಾಮಕ ವಾಹನಗಳು ಗ್ರಾಮಕ್ಕೆ ಧಾವಿಸಿದರೂ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಘಟನೆಯಲ್ಲಿ ಬೆಂಕಿ ನಂದಿಸಲು ಯತ್ನಿಸಿದ ಸತೀಶ್ ಅವರ ತಾಯಿಗೂ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಹಿತಿ ಪಡೆದ ಜಿಲ್ಲಾ ಮ್ಯಾಜಿಸ್ಟ್ರೇಟ್, ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮತ್ತು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಶಾರ್ಟ್ ಸರ್ಕ್ಯೂಟ್‌ನಿಂದ ಹುಲ್ಲಿನ ಛಾವಣಿಯ ಮೇಲಿದ್ದ ಲಾಟಿನ್​ಗೆ ಬೆಂಕಿ ತಗುಲಿ ಅವರು ಸುಟ್ಟು ಕರಕಲಾಗಿದ್ದಾರೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top