ಪುತ್ತೂರು : ನಗರದ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಗರ್ಭಗುಡಿಗೆ ದಾನಿಗಳಿಂದ ಕೊಡುಗೆಯಾಗಿ ನೀಡಿದ ಹಿತ್ತಾಳೆ ಹೊದಿಕೆ ಸಮರ್ಪಣಾ ಸಮರ್ಪಣಾ ಕಾರ್ಯಕ್ರಮ ಸೋಮವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಭಾನುವಾರ ಸಂಜೆ ದೇವತಾ ಪ್ರಾರ್ಥನೆ, ಸಪ್ತಶುದ್ಧಿ, ವಾಸ್ತು ರಕ್ಷೋಘ್ನ ಹೋಮ, ದಿಕ್ಷಾಲಬಲಿ ನಡೆಯಿತು. ಸೋಮವಾರ ಬೆಳಿಗ್ಗೆ 7 ರಿಂದ ಪಂಚಗವ್ಯ, ಸ್ವಸ್ತಿ ಪುಣ್ಯಾಹ, ಪುರಸ್ಸರ ಪಂಚವಿಂಶತಿ ಕಲಶ ಪ್ರತಿಷ್ಠೆ, ಪ್ರಧಾನ ಹೋಮ, ಕಲಶಾಭಿಷೇಕ, ಪ್ರಸನ್ನ ಪೂಜೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.
ಕಾರ್ಯಕ್ರಮದಲ್ಲಿ ಶ್ರೀ ಗುರುರಾಘವೇಂದ್ರ ಸೇವಾ ಸಮಿತಿ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.