ಪುತ್ತೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದ.ಕ.ಜಿಲ್ಲಾ ಪಂಚಾಯಿತಿ, ಹಾಗೂ ಪುತ್ತೂರು ತಾಲೂಕು ಪಂಚಾಯಿತಿ ಆಶ್ರಯದಲ್ಲಿ ವಿಕಲ ಚೇತನರಿಗೆ ವಾಹನ ವಿತರಣೆ ಕಾರ್ಯಕ್ರಮ ಮಾ 13 ರಂದು ಪುತ್ತೂರು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆಯಿತು.
ಶಾಸಕ ಸಂಜೀವ ಮಠಂದೂರು ವಿಕಲಚೇತನರಿಗೆ ಸಾಂಕೇತಿಕವಾಗಿ ವಾಹನ ವಿತರಿಸಿ ಮಾತನಾಡಿ, ವಿಕಲ ಚೇತನರ ದೈನಂದಿನ ಚಟುವಟಿಕೆಗಳಿಗೆ ಪೂರಕವಾಗಿ ವಾಹನ ಸಹಿತ ವಿವಿಧ ಸಲಕರಣೆಗಳನ್ನು ವಿತರಿಸುವ ಕೆಲಸ ಆಗಿದೆ ಎಂದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮಪ್ಪ ಶೆಟ್ಟಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್, ತಾಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಾಜಾ ರಾದಕೃಷ್ಣ ಆಳ್ವ, ,ಬನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯ ಏಕ, ಫಲಾನುಭವಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಐದು ಮಂದಿ ಫಲಾನುಭವಿಗಳಿಗೆ ವ್ಹೀಲ್ ಚೆಯರ್ ಸಹಿತ ಇನ್ನಿತರ ಸಲಕರಣೆಗಳನ್ನು ವಿತರಿಸಲಾಯಿತು.