ಪುತ್ತೂರು : ನಗರದ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮಂಗಳವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಪೂಜಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಮಠದ ಶ್ರೀ ಸತ್ಯನಾರಾಯಣ ಗುಡಿಯಲ್ಲಿ ಮಠದ ಪ್ರಧಾನ ಅರ್ಚಕ ರಾಘವೇಂದ್ರ ಉಡುಪರ ನೇತೃತ್ವದಲ್ಲಿ ಪಂಚಗವ್ಯ ಪುಣ್ಯಾಹ, ಪುರಸ್ಸರ, ಕಲಶಾಭಿಷೇಕ, ಕಲಶ ಪ್ರತಿಷ್ಠೆ, 10.30 ರಿಂದ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 1ಕ್ಕೆ ಮಹಾಪೂಜೆ, ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ಜರಗಿತು.
ಈ ಸಂದರರ್ಭದಲ್ಲಿ ಮಠದ ಟ್ರಸ್ಟಿಗಳಾದ ಯನ್.ಸುಬ್ರಹ್ಮಣ್ಯಂ, ಬೆಟ್ಟ ಈಶ್ವರ ಭಟ್, ಲೋಕೇಶ್ ಹೆಗ್ಡೆ, ಗಣಪತಿ ನಾಯಕ್, ಕಾರ್ಯದರ್ಶಿ ಯು.ಪೂವಪ್ಪ, ಅರ್ಚಕ ವೃಂದ, ಭಕ್ತಾದಿಗಳು ಪಾಲ್ಗೊಂಡಿದ್ದರು.