ಲಕ್ಷ್ಮೀದೇವಿ ಬೆಟ್ಟ ಶ್ರೀ ಮಹಾಲಕ್ಷ್ಮೀ ಬಿಂಬದ ಮೇಲೆ ಮೀನ ಸಂಕ್ರಮಣದ ಸೂರ್ಯರಶ್ಮಿ ಸ್ಪರ್ಶ | ಕಣ್ತುಂಬಿಕೊಂಡ ಹಲವಾರು ಭಕ್ತರು

ಪುತ್ತೂರು: ಪ್ರತಿ ವರ್ಷ ಮೀನ ಸಂಕ್ರಮಣದಂದು ವಿಶೇಷವಾಗಿ ಮುಂಜಾನೆಯ ವೇಳೆ ಸೂರ್ಯನ ರಶ್ಮಿಯು ದೇವಿಯ ಬಿಂಬಕ್ಕೆ ಸ್ಪರ್ಶಿಸುತ್ತಿರುವ ರಾಜ್ಯದ ಏಕೈಕ ದೇವಸ್ಥಾನ ಎಂದು ಪ್ರಸಿದ್ಧಿ ಪಡೆದಿರುವ, ಇಲ್ಲಿನ ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಿಯ ಬಿಂಬಕ್ಕೆ ಮಂಗಳವಾರದ  ಮೀನ ಸಂಕ್ರಮಣದಂದು ಮುಂಜಾನೆ ಸೂರ್ಯ ರಶ್ಮಿಯ ಸ್ಪರ್ಶವಾಯಿತು.

ಪ್ರಾತಃಕಾಲ ಶ್ರೀಮಹಾಲಿಂಗೇಶ್ವರ ಭಜಕ ವೃಂದದವರಿಂದ ಭಜನೆ, ಶ್ರೀಕೃಷ್ಣ ಉಪಾಧ್ಯಾಯರವರಿಂದ ವೇದ ಮಂತ್ರ ಘೋಷ ನೆರವೇರಿತು. ಬೆಳಿಗ್ಗೆ 7ಗಂಟೆಯಿಂದ 7.30ರ ಸಮಯದಲ್ಲಿ ಕ್ಷೇತ್ರದ ಮೂರು ಬಾಗಿಲುಗಳನ್ನು ದಾಟಿ ಸೂರ್ಯನ ಕಿರಣಗಳು ಗರ್ಭಗುಡಿಯಲ್ಲಿ ನೆಲೆಯಾಗಿರುವ ಮಹಾಲಕ್ಷ್ಮೀಯ ಬಿಂಬದ ಮೇಲೆ ಸ್ಪರ್ಶಿಸಿದೆ. ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿ ಎನ್.ಐತ್ತಪ್ಪ ಸಪಲ್ಯರು ಮಹಾಲಕ್ಷ್ಮೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ವೈದಿಕರಿಂದ ವೇದ, ಘೋಷ ಮಂತ್ರ ಮೊಳಗಿತು. ನೂರಾರು ಮಂದಿ ಭಕ್ತಾದಿಗಳು ಈ ಅಪೂರ್ವ ಕ್ಷಣವನ್ನು ಕಣ್ತುಂಬಿಕೊಂಡು ಪುನೀತರಾದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ರವಿರಾಮ ಭಟ್, ಭಕ್ತರಾದ ವನಿತಾ, ಸುಮಂಗಳ ಶೆಣೈ, ವಿಜಯ ಕುಮಾರ್ ಕೊಪ್ಪಳ, ಕ್ಷೇತ್ರದ ಜನಾರ್ದನ ಬೆಟ್ಟ, ಕೃಷ್ಣಪ್ರಸಾದ್ ಬೆಟ್ಟ, ಲಕ್ಷ್ಮೀಪ್ರಸಾದ್ ಬೆಟ್ಟ, ಮತ್ತಿತರರು ಉಪಸ್ಥಿತರಿದ್ದರು.







































 
 

ವರ್ಷದ ಕೊನೆಯ ಮಾಸವಾಗಿರುವ ಮೀನ ಸಂಕ್ರಮಣದಂದು ಸೂರ್ಯ ತನ್ನ ಪಥ ಬದಲಿಸುವ ಮಹತ್ವದ ಘಟ್ಟ.ಬೆಂಗಳೂರಿನ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ದಿನ ಸಂಜೆಯ ವೇಳೆಗೆ ಸೂರ್ಯನ ರಶ್ಮಿಯು ಬಿಂಬವನ್ನು ಸ್ಪರ್ಶಿಸುತ್ತಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top