ಖಾಸಗಿ- ಸರಕಾರಿ ಸಹಭಾಗಿತ್ವದಲ್ಲಿ 11 ಮೆಡಿಕಲ್‌ ಕಾಲೇಜು ಸ್ಥಾಪನೆ

ಬೆಂಗಳೂರು : ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ (PPP) ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿ ರಾಜ್ಯದಲ್ಲಿ 11 ಮೆಡಿಕಲ್​ ಕಾಲೇಜುಸ್ಥಾಪನೆಗೆ ಸರಕಾರ ನಿರ್ಧರಿಸಿದೆ. ದಕ್ಷಿಣ ಕನ್ನಡ, ಉಡುಪಿ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ, ಕೋಲಾರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ವಿಜಯನಗರ ಮತ್ತು ರಾಮನಗರದಲ್ಲಿ ಪ್ರಾರಂಭವಾಗಲಿವೆ. ರಾಜ್ಯ ಸರ್ಕಾರ ಈಗಾಗಲೆ ಎರಡು ವೈದ್ಯಕೀಯ ಕಾಲೇಜುಗಳಿಗಾಗಿ ನಿವೇಶನ ಹಂಚಿಕೆ ಮತ್ತು ಇತರ ಪ್ರಕ್ರಿಯೆಗಳನ್ನು ಮುಗಿಸಿದೆ. ಈ ಎರಡು ವೈದ್ಯಕೀಯ ಕಾಲೇಜುಗಳು 2024-25ರ ವೇಳೆಗೆ ಬೆಂಗಳೂರು ಗ್ರಾಮಾಂತರ ಮತ್ತು ದಾವಣಗೆರೆಯಲ್ಲಿ ಕಾರ್ಯಾರಂಭ ಮಾಡಲಿವೆ.


ರಾಜ್ಯದ ಗ್ರಾಮಾಂತರ ಪ್ರದೇಶದ ಜನರಲ್ಲಿ ವೈದ್ಯಕೀಯ ಆರೋಗ್ಯ ಸೌಲಭ್ಯಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಹಾಗೂ ಹಳ್ಳಿಯಲ್ಲಿ ವಾಸಿಸುವವರಿಗೆ, ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದ ಹೆಚ್ಚಿನ ಅವಕಾಶವನ್ನು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ 11 ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕಿ ಸುಜಾತಾ ರಾಥೋಡ್ ತಿಳಿಸಿದ್ದಾರೆ.

ದಾವಣಗೆರೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ವೈದ್ಯಕೀಯ ಕಾಲೇಜುಗಳಿಗೆ ನಿವೇಶನ ಹಂಚಿಕೆ ಮತ್ತು ಇತರೆ ಅನುಮತಿಗಳು ಪೂರ್ಣಗೊಂಡಿವೆ. ಕಾಲೇಜುಗಳನ್ನು ಮುನ್ನಡೆಸಲು ಬಂಡವಾಳ ಹೂಡಿಕೆದಾರರನ್ನು ಎದುರು ನೋಡುತ್ತಿದ್ದೇವೆ. ಈ ಎರಡು ಜಿಲ್ಲೆಗಳಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಸಲಿವೆ ಎಂದಿದ್ದಾರೆ.







































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top