ಬಿಜೆಪಿ ಎಂಎಲ್‌ಸಿ ಆರ್​.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ

8 ಕೋಟಿ ರೂ. ಮೌಲ್ಯದ ಸೀರೆ, ತಟ್ಟೆ-ಲೋಟಾ, ಬ್ಯಾಗ್‌ ಪತ್ತೆ

ಹಾವೇರಿ : ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್​.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಬೀರಲಿಂಗೇಶ್ವರ ನಗರದಲ್ಲಿರುವ ಶಂಕರ್​ ಮನೆ ಮೇಲೆ ನಿನ್ನೆ ತಡರಾತ್ರಿ ದಾಳಿಯಾಗಿದ್ದು, ಈ ವೇಳೆ ಆರ್.ಶಂಕರ್ ಗೃಹಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಹಂಚಲು ತಂದಿದ್ದ ಹಲವು ವಸ್ತುಗಳು ಪತ್ತೆಯಾಗಿವೆ. ಆರ್.ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ, ಲೋಟಾ ಹಾಗೂ ಎಲ್.ಕೆ.ಜಿಯಿಂದ ಪದವಿ ಕಾಲೇಜು ಮಕ್ಕಳ ತನಕ ಹಂಚಲು ತಂದಿದ್ದ ಸ್ಕೂಲ್ ಬ್ಯಾಗ್ ಸಿಕ್ಕಿದೆ.
ಸುಮಾರು 8 ಕೊಟಿ ರೂಪಾಯಿ ವೆಚ್ಚದ ವಸ್ತುಗಳು ಪತ್ತೆಯಾಗಿವೆ ಎಂದು ಅಂದಾಜಿಸಲಾಗಿದ್ದು, ಈ ಎಲ್ಲ ವಸ್ತುಗಳ GST ಬಿಲ್ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್ ಶಂಕರ್, ಬಿಲ್ ಕೊಡಲು ಅವಕಾಶ ಕೇಳಿದ್ದಾರೆ. ಒಂದು ವೇಳೆ ಸರಿಯಾದ ಜಿಎಸ್‌ಟಿ ಬಿಲ್ ಇಲ್ಲದಿದ್ರೆ ದಂಡ ವಿಧಿಸುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top