ಪುತ್ತೂರು: ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಮಾರ್ಚ್ 26ರಂದು ನಾಮಕರಣ ಮಾಡುವ ಹಿನ್ನೆಲೆಯಲ್ಲಿ ಪೂರ್ವತಯಾರಿಯಾಗಿ ಶಾಸಕ ಸಂಜೀವ ಮಠಂದೂರು ಅವರು ಗುರುವಾರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಇದೇ ಸಂದರ್ಭ ಜೊತೆಗಿದ್ದ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡುತ್ತಾ, ಕೋಟಿ – ಚೆನ್ನಯರ ನಾಮಫಲಕವನ್ನು ಪುತ್ತೂರು ಪೇಟೆಗೆ ಕಾಣಿಸುವಂತೆ ಸರಿಯಾಗಿ ಅಳವಡಿಸಲು ಸೂಚನೆ ನೀಡಿದರು. ನಾಮಕರಣದ ದಿನದಂದು ಕಾರ್ಯಕ್ರಮ ಸುಸೂತ್ರವಾಗಿ ನಡೆಸಲು ಸೂಕ್ತ ಮುನ್ನೆಚ್ಚರಿಕೆ ವಹಿಸಲು ಕಿವಿಮಾತು ಹೇಳಿದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ, ಅಧಿಕಾರಿಗಳು ಉಪಸ್ಥಿತರಿದ್ದರು.