ಪುತ್ತೂರು : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದು ವ್ಯಕ್ತಿಯೋರ್ವನನ್ನು ಪುತ್ತೂರು ನಗರ ಠಾಣೆ ಪೊಲೀಸರು ಕಾರ್ಯಾಚರಣೆಯೊಂದರಲ್ಲಿ ಮುಕ್ರಂಪಾಡಿ ಬಸ್ ತಂಗುದಾಣದಲ್ಲಿ ಬಂಧಿಸಿ ಆತನಿಂದ 40 ಸಾವಿರ ರೂ. ಮೌಲ್ಯದ 1.020 ಕೆ.ಜಿ.ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆ ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಇಕ್ಬಾಲ್ ಯಾನೆ ಇಕ್ಕು (35) ಬಂಧಿತ ಆರೋಪಿ.
ಆರೋಪಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮುಕ್ರಂಪಾಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಇಟ್ಟುಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಎಸ್ಪಿ, ಎಡಿಷನಲ್ ಎಸ್ಪಿ ಹಾಗೂ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ನಗರ ಠಾಣಾ ಇನ್ಸ್ಪೆಕ್ಟರ್ ಸುನಿಲ್ ಕುಮಾರ್, ಎಸ್.ಐ.ಶ್ರೀಕಾಂತ್ ರಾಥೋಡ್ ಅವರ ನೇತೃತ್ವದಲ್ಲಿ ಎಎಸ್ ಐ ಲೋಕನಾಥ್, ಹೆಚ್ ಸಿ ಸ್ಕರಿಯ, ಉದರ, ಪ್ರಶಾಂತ್ ರೈ, ಜಗದೀಶ್, ಸುಬ್ರಹ್ಮಣ್ಯ, ಸಿಬ್ಬಂದಿಗಳಾದ ರೇವತಿ, ಶ್ರೀಮಂತ್ ಕರ್ತವ್ಯದಲ್ಲಿದ್ದಾಗ ಅನುಮಾನಾಸ್ಪದವಾಗಿ ಮುಕ್ರಂಪಾಡಿ ತಂಗುದಾಣದಲ್ಲಿ ನಿಂತಿನ ವ್ಯಕ್ತಿಯನ್ನು ಮತ್ತು ಆತನ ಕೈಯಲ್ಲಿದ್ದ ಚೀಲವನ್ನು ಪರಿಶೀಲಿಸಿದಾಗ ಚೀಲದೊಳಗೆ ಪ್ಲಾಸ್ಟಿಕ್ ಕವರಿನಲ್ಲಿ ಗಾಂಜಾ ಕಂಡು ಬಂದಿದ್ದು, ತಕ್ಷಣ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.