ಪುತ್ತೂರು : ಬನ್ನೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಮಕ್ಕಳು ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರು ತರಬಾರದು ಎಂಬ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪ್ರತೀ ಶಾಲೆಗಳಿಗೆ ಒದಗಿಸಲಾಗುತ್ತಿದೆ. ಖಾಸಗಿ ಶಾಲೆಗಳಿಗೆ ನಾವೇ ಕಡಿಮೆಯಿಲ್ಲ ಎಂಬ ದೃಷ್ಟಿಯಿಂದ ಸ್ಮಾರ್ಟ್ ಕ್ಲಾಸ್ ಗಳನ್ನು ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳು ಮುಚ್ಚಬಾರದು ಎಂಬ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಇತಿಹಾಸ ನಿರ್ಮಾಣ ಮಾಡುವ ಕೆಲಸ ಆಗಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯ ಶಿಕ್ಷಕ ರಾಮಚಂದ್ರ ಬಿ, ಎಸ್.ಡಿ.ಎಮ್.ಸಿ. ಅಧ್ಯಕ್ಷ ಗುರುಪ್ರಸಾದ್,, ನಗರಸಭಾ ಸದಸ್ಯೆ ಗೌರಿ ಬನ್ನೂರು, ಅಂಗನವಾಡಿ ಕಾರ್ಯಕರ್ತೆ ರೋಹಿಣಿ, ,ಎಸ್.ಡಿ.ಎಮ್.ಸಿ. ಸದಸ್ಯರು, ಪೋಷಕರ,, ಶಿಕ್ಷಕವೃಂದ, ಹಾಗೂ ಮಕ್ಕಳು ಉಪಸ್ಥಿತರಿದ್ದರು.