ಪುತ್ತೂರು : ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂದ್ದ 2021 ನೇ ಸಾಲಿನ ಕೃತಿಗಳಿಗೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು.
ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಹಾಗೂ ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ್ ಹೆಚ್.ಜಿಯವರ ಚಪಡ ಕಾದಂಬರಿಗೆ ವಸುದೇವ ಭೂಪಾಲಂ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿವಿ ಕುಲಪತಿಡಾ. ನಿರಂಜನ ವಾನಳ್ಳಿ, ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಂ ರಾಯಪುರ, ಸಾಹಿತಿ ಪ್ರೊ. ಕಾಳೇಗೌಡ ನಾಗವಾರ, ಬಿ.ಎಂ ಪಟೇಲ್ ಪಾಂಡು ಉಪಸ್ಥಿತರಿದ್ದರು.