ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಗುರುವಾರ ಸಂಪನ್ನಗೊಂಡಿತು.
ಜಾತ್ರೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ದೇವರ ಬಲಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ ಬಳಿಕ ಅನ್ನಸಂತರ್ಪಣೆ ಜರಗಿತು.
ರಾತ್ರಿ ರಂಗಪೂಜೆ ದೈವದ ನೇಮೋತ್ಸವದೊಂದಿಗೆ ಜಾತ್ರೆ ಸಂಪನ್ನಗೊಂಡಿತು.
ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಡಾ,ಎಂ.ಕೆ.ಪ್ರಸಾದ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕಪ್ಪ ಗೌಡ ಕೆರೆಮನೆ, ಸದಸ್ಯರಾದ ಕುತ್ತಿಗದ್ದೆ ಜನಾರ್ದನ ಜೋಯಿಸ, ನಾಗೇಶ್ ನಾಯ್ಕ್, ನಾರಾಯಣ ನಾಯ್ಕ್, ಬಾಲಚಂದ್ರ ಗೌಡ ಕಡ್ಯ, ವೇದಾವತಿ ಕೆದ್ಕಾರು, ಭಕ್ತಾದಿಗಳು ಉಪಸ್ಥಿತರಿದ್ದರು. ಪ್ರಧಾನ ಅರ್ಚಕ ರಮೇಶ ಬೈಪಾಡಿತ್ತಾಯ, ಸಹಾಯಕ ಅರ್ಚಕ ಶಂಕರನಾರಾಯಣ ಭಟ್, ಸಿಬ್ಬಂದಿ ವಿಜಿತ್, ಸ್ವಯಂ ಸೇವಕರು ಸಹಕರಿಸಿದರು.