ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರಕಾರ ಆದೇಶ

ಬೆಂಗಳೂರು: ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಈ ಕುರಿತು ಟ್ವೀಟ್‌ ಮಾಡಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಕುಂಬಾರ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಕುಂಬಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಕುಂಬಾರ, ಚಕ್ರಸಾಲಿ, ಕುಲಾಲ ಸೇರಿದಂತೆ ಇನ್ನಿತರ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 2ಎ ನ ಕ್ರಮ ಸಂಖ್ಯೆ 6ಎ ಯಿಂದ ಕ್ಯೂವರೆಗೆ ಕ್ರಮವಾಗಿ ಕುಂಬಾರ, ಚಕ್ರಸಾಲಿ ಗುಣಗ, ಗಣಗಿ, ಕೊಡವ, ಕುಲ, ಕುಲಾಲ, ಕುಂಬಾರ್, ಕುಂಬಾರ್ಡ್, ಕುಮ್ಮಾರ, ಕಸವನ್ ,ಮೂಲ್ಯ, ಸಜ್ಜನ ಕುಂಬಾರ, ಖುಮಾರ, ಕುಂಭಾರ, ಖುಂಭಾರ, ಕುಲಾಲರ್ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿ ಹಿಂದಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಪಾಹೀನ್ ಪರ್ವೀನ್ ಆದೇಶ ಹೊರಡಿಸಿದ್ದಾರೆ.



































 
 


ರಾಜ್ಯದಲ್ಲಿ ಕುಂಬಾರ ಸಮುದಾಯ ಸುಮಾರು 28 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದ್ದು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದ ಹಾಗೂ ಶೋಷಿತ ಸಮುದಾಯವಾಗಿದೆ. ಕುಂಬಾರ ವೃತ್ತಿಯನ್ನೇ ನಂಬಿಕೊಂಡಿರುವ ಈ ಸಮುದಾಯ ಹೊಟ್ಟೆಪಾಡಿಗಾಗಿ ಊರು ಬಿಡುತ್ತಿದ್ದಾರೆ. ಇದರು ಈ ಸಮುದಾಯದ ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯಗಳು ಕೇಳಿಬಂದಿದ್ದವು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top