ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವ ಹಾಗೂ ಹಿಂದೂ ಧರ್ಮದ ವಿರುದ್ಧ ಕೆಟ್ಟದಾಗಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಶೇಷಾದ್ರಿಪುರ ಠಾಣೆ ಪೊಲೀಸರು ನಟ ಚೇತನ್ನನ್ನು ಬಂಧಿಸಿದ್ದಾರೆ.
ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದು ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಟ್ವೀಟ್ ಮಾಡಿಕೊಂಡು ಅದಕ್ಕೊಂದು ಫೋಟೊ ಕೂಡ ಹಂಚಿಕೊಂಡಿದ್ದರು. ಜತೆಗೆ, ಉರಿಗೌಡ ಮತ್ತು ನಂಜೇಗೌಡ ಬಗ್ಗೆ ಟ್ವೀಟ್ ಮಾಡಿಕೊಂಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ ಬೆನ್ನಲ್ಲೇ ಶಿವಕುಮಾರ್ ಎಂಬವರು ಶೇಷಾದ್ರಿಪುರ ಠಾಣೆಗೆ ದೂರು ದಾಖಲಿಸಿದ್ದರು.
ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ ದೂರಿನ ಬೆನ್ನಲ್ಲೇ ಈ ಬಗ್ಗೆ ಶೇಷಾದ್ರಿಪುರಂ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ನಟ ಚೇತನ್ ಅವರನ್ನು ಬೆಳಗ್ಗೆ ಬಂಧಿಸಿದ ಪೊಲೀಸರು, ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.