ಪುತ್ತೂರು : ಕಾವು ನವೋದಯ ಒಕ್ಕೂಟದ ಸದಸ್ಯರಿಂದ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವದ ಪೂರ್ವಭಾವಿಯಾಗಿ ಶ್ರಮದಾನ ನಡೆಯಿತು.

ದೇವಸ್ಥಾನದ ಹೊರಾಂಗಣವನ್ನು ಸ್ವಚ್ಛಗೊಳಿಸುವ ಮೂಲಕ ಶ್ರಮದಾನ ಮಾಡಿದರು.
ಒಕ್ಕೂಟದ ಅಧ್ಯಕ್ಷ ಸುಬ್ರಾಯ ಗೌಡ, ಮಾಜಿ ಉಪಾಧ್ಯಕ್ಷೆ ನಿರ್ಮಲಾ ರೈ ಉಸ್ತುವಾರಿಯಲ್ಲಿ ನಡೆದ ಕರಸೇವೆಯಲ್ಲಿ ಎಲ್ಲಾ ಗುಂಪಿನ ಪ್ರತಿನಿಧಿಗಳು ಪಾಲ್ಗೊಂಡಿದ್ದರು.