ನಾಳೆ (ಮಾ.22) : ಮಕ್ಕಳ ಹಕ್ಕುಗಳ ಪರವಾದ ಚುನಾವಣಾ ಪ್ರಣಾಳಿಕೆಗಾಗಿ ಹಕ್ಕೊತ್ತಾಯ ಸಭೆ

ಪುತ್ತೂರು: ಬಾಲಕಾರ್ಮಿಕ ಪದ್ಧತಿ ವಿರೋಧಿ ಆಂದೋಲನ, ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ, ದ.ಕ.ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇದ್ರಗಳ ಒಕ್ಕೂಟ ಹಾಗೈ ಎಸ್ ಡಿಎಂಸಿ ಸಮನ್ವಯ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಹಕ್ಕುಗಳ ಪರವಾದ ಚುನಾವಣಾ ಪ್ರಣಾಳೀಕೆಗಾಗಿ ಹಕ್ಕೊತ್ತಾಯ ಸಭೆಯನ್ನು ಮಾ.22 ಬುಧವಾರ ಪುತ್ತೂರು ಲಯನ್ಸ್ ಕ್ಲಬ್‍ನಲ್ಲಿ ಆಯೋಜಿಸಲಾಗಿದೆ.

ರಾಷ್ಟ್ರೀಯ ರಾಜಕೀಯ ಪಕ್ಷಗಳ ಕಚೇರಿಗಳಿಗೆ ಭೇಟಿ ಮಾಡಿ ಅವರು ತಮ್ಮ ಚುನಾವಣಾ ಪ್ರಣಾಳಕೆಯಲ್ಲಿ ಮಕ್ಕಳ ಬೇಡಿಕೆಗಳನ್ನು ಅಳವಡಿಸಿಕೊಂಡು ಮುಂದಿನ ದಿನಗಳಲ್ಲಿ ಅವುಗಳನ್ನು ಅನುಷ್ಠಾನಕ್ಕೆ ತರುವಂತೆ ಮತ್ತು ಮಕ್ಕಳಿಗೆ ಮೂಲಭೂತ ಸೌಕರ್ಯ, ಹಕ್ಕುಗಳಾದ ರಕ್ಷಣೆ, ಪೋಷಣೆ, ಆರೋಗ್ಯ, ಪೌಷ್ಠಿಕ ಾಹಾರ, ಗುಣಮಟ್ಟದ ಶಿಕ್ಷಣ, ಮಕ್ಕಳಿಗೆ ಸಂಬಂಧಿಸಿದ ಕಾನೂನು ಕಾಯಿದೆ, ಪಾಲಿಸಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಮೂಲಕ ರಾಜ್ಯದ ಎಲ್ಲಾ ಮಕ್ಕಳಿಗೂ ಅವರ ಹಕ್ಕುಗಳ ಕುರಿತು ಖಾತರಿಪಡಿಸಿ, ಮಕ್ಕಳ ಸ್ನೇಹಿ ರಾಜ್ಯವನ್ನಾಗಿ ಮಾಡುವ ನಿಟ್ಟಿನಲ್ಲಿಪಕ್ಷಗಳು ಮಾಡಬೇಕು ಎಂಬ ನಿಟ್ಟಿನಲ್ಲಿ ಸಭೆಯಯನ್ನು ಆಯೋಜಿಸಲಾಗಿದೆ.

ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಬಾಲಕಾರ್ಮಿಕ ಪದ್ಧತಿ ವಿರೋಧಿ ಆಂದೋಲನದ ದ.ಕ.ಜಿಲ್ಲಾ ಸಂಚಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top