ಪುತ್ತೂರು: ಪಾಣಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃಧ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ಬುಧವಾರ ನಡೆಯಿತು.
ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಪಾಣಾಜೆ ಭಾಗದ ಜನರಿಗೆ 12:40 ಕೋಟಿ ರೂ.ಗಳ ಸಮುದಾಯ ಆರೋಗ್ಯ ಕೇಂದ್ರ ನೀಡಿರುವ ಸರಕಾರದ ಮಹತ್ತರ ಕೊಡುಗೆಯಾಗಿದೆ. ಮುಂದಿನ ದಿನಗಳಲ್ಲಿ ಈ ಕ್ಷೇತ್ರದ ಸೇವೆಯನ್ನು ಮಾಡುವಲ್ಲಿ ನಿಮ್ಮೆಲ್ಲರ ಸಹಕಾರ ಇರಲಿ ಎಂದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ್ ತಿಮ್ಮಪ್ಪ ಶೆಟ್ಟಿ ಮಾತನಾಡಿ, ನನ್ನ ಅನುದಾನದ ಬಹುಪಾಲನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭಿವೃದ್ಧಿಯ ದಿಸೆಯಿಂದ ನೀಡಿದ್ದೇನೆ ಎಂದರು.
ಮುಂದಿನ ಅವಧಿಯಲ್ಲೂ ಮಠಂದೂರು ಶಾಸಕರಾಗಲಿ : ಪದ್ಮನಾಭ ಬೋರ್ಕರ್
ಪಾಣಾಜೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್ ಮಾತನಾಡಿ, ಶಾಸಕರು ಸಹಕಾರ ಕ್ಷೇತ್ರದಲ್ಲಿ ರೈತರಿಗೆ ಅನುಕೂಲವಾಗುವ ಕೆಲಸ ಕಾರ್ಯಗಳನ್ನು ಸಚಿವರುಗಳ ಸಹಕಾರದಿಂದ ನಿರ್ವಹಿಸಿದ್ದಾರೆ. ಮುಂದಿನ ಅವಧಿಯಲ್ಲಿಯೂ ಸಂಜೀವ ಮಟಂದೂರುರವರು ಶಾಸಕರಾಗಿ ಹಳ್ಳಿ ಹಳ್ಳಿಗಳ ಬೆಳವಣಿಗೆಗೆ ತಮ್ಮ ಕೊಡುಗೆಯನ್ನು ನೀಡುವಂತಾಗಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ,, ತಾಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು