ಪುತ್ತೂರು: ದಿ.ಪ್ರವೀಣ್ ನೆಟ್ಟಾರು ರವರ ಸ್ಮರಣಾರ್ಥವಾಗಿ ಸವಣೂರು ಗ್ರಾ.ಪಂ.ವತಿಯಿಂದ ಅಂಕತ್ತಡ್ಕದಲ್ಲಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತ ದ ಲೋಕಾರ್ಪಣೆ ಕಾರ್ಯಕ್ರಮ ಬುಧವಾರ ನಡೆಯಿತು..

ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು,ಸಚಿವ ಎಸ್ ಅಂಗಾರ ಪುಷ್ಪಾರ್ಚನೆ ಮಾಡಿ ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ರೈ, ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪುತ್ತೂರು ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷ ದಿನೇಶ್ ಮೆದು, ಕಾಣಿಯೂರು ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ಉದನಡ್ಕ, ಪ್ರಮುಖರಾದ ಇಂದಿರಾ ಬಿ.ಕೆ., ಜಗದೀಶ್ ಅಧಿಕಾರಿ ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.