ಹಾಲ್ ಟಿಕೆಟ್ ತೋರಿಸಿದರೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಟಿಕೆಟಿಲ್ಲದೆ ಪ್ರಯಾಣಿಸಬಹುದು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರೀಕ್ಷೆ ಬರೆಯಲಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ದಿನ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸುವ ಕೊಡುಗೆ ನೀಡಿದೆ.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಪರೀಕ್ಷೆ ಮಾ.31ರಿಂದ ಆರಂಭವಾಗಲಿದ್ದು, ಏ.15ರವರೆಗೆ ನಡೆಯಲಿವೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ದಿನಗಳಂದು ‘ಪರೀಕ್ಷಾ ಪ್ರವೇಶ ಪತ್ರವನ್ನು’ ತೋರಿಸಿ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಪ್ರಯಾಣಿಸಬಹುದು ಎಂದು ನಿಗಮದ ನಿರ್ದೇಶಕರು ತಿಳಿಸಿದ್ದಾರೆ.
ಚಾಲಕ ಹಾಗೂ ನಿರ್ವಾಹಕರಿಗೆ ಸಿಬ್ಬಂದಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯಲು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಕೋರಿದ್ದನ್ನು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ಅಥವಾ ಪ್ರವೇಶ ಪತ್ರವನ್ನು ಸಾರಿಗೆ ಸಿಬ್ಬಂದಿಗಳಿಗೆ ತೋರಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಅಂತೆಯೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ವಿದ್ಯಾರ್ಥಿಗಳ ಪ್ರವೇಶ ಪತ್ರದ ಆಧಾರದ ಮೇಲೆ ಬಸ್ ಪ್ರಯಾಣಿಸುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ ಹತ್ತಲು ಹಾಗೂ ಇಳಿಯಲು ಅನುಕೂಲ ಮಾಡಿಕೊಂಡುವಂತೆ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ ಎಂದು ನಿಗಮದ ನಿರ್ದೇಶಕರು ತಿಳಿಸಿದ್ದಾರೆ.