ಪುತ್ತೂರು: ಇತಿಹಾಸ ಪ್ರಸಿದ್ಧ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ರಾತ್ರಿ ಶ್ರೀ ಮಹಾಕಾಳಿ ಅಮ್ಮನವರ ಮೆಚ್ಚಿ ಜಾತ್ರೆ ಜರಗಿತು.
ಭಕ್ತವತ್ಸಲಾ ಹಾಗೂ ಕಾರ್ಣಿಕದ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಮಹಾಕಾಳಿ ಅಮ್ಮನವರ ವರ್ಷಾವಧಿ ಮೆಚ್ಚಿ ಜಾತ್ರೆ ಇದಾಗಿದ್ದು, ಸಾವಿರಾರು ಭಕ್ತರು ಆಗಮಿಸಿ, ದೇವಿಯ ದರ್ಶನ ಪಡೆದು ಪುನೀತರಾದರು.


ನೇಮೋತ್ಸವದ ಅಂಗವಾಗಿ ಅನ್ನಸಂತರ್ಪಣೆ ಜರಗಿತು.