ವಿಟ್ಲ: ಬಂಟ್ವಾಳ ಹೋಬಳಿಯ 94ಸಿ ಹಾಗೂ 94 ಸಿಸಿ ಹಕ್ಕುಪತ್ರ ವಿತರಣೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಗುರುವಾರ ಇಲ್ಲಿನ ಬ್ರಹ್ಮಶ್ರೀ ಸಭಾಭವನದಲ್ಲಿ ನಡೆಯಿತು.
ಹಕ್ಕುಪತ್ರ ವಿತರಿಸಿ, ಅಹವಾಲು ಸ್ವೀಕರಿಸಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಕೋವಿಡ್ ಸಮಸ್ಯೆಯ ನಡುವೆಯೂ 1300 ಜನರಿಗೆ ಸಾಗುವಳಿ ಚೀಟಿ ಕೊಡುವ ಕೆಲಸ ಮಾಡಲಾಗಿದೆ. ಶೇ. 80 ಜನರಿಗೆ 94ಸಿ ಹಾಗೂ 94 ಸಿಸಿ ಹಕ್ಕುಪತ್ರ ನೀಡಲಾಗಿದೆ. ಈಗಾಗಲೇ ಸಾಧ್ಯವಾದಷ್ಟು ಜನರಿಗೆ ಪ್ರಾಮಾಣಿಕವಾಗಿ ಹಕ್ಕುಪತ್ರ ನೀಡುತ್ತಿದ್ದೇವೆ. ಹಕ್ಕುಪತ್ರ ಸಿಗದವರಿಗೆ ಚುನಾವಣೆ ನಂತರ ಸಿಟ್ಟಿಂಗ್ ಮಾಡಿಕೊಡುವ ಪ್ರಯತ್ನ ಮಾಡಲಾಗುವುದು ಎಂದರು.

ಬಂಟ್ವಾಳ ತಹಶೀಲ್ದಾರ್ ಎಸ್.ಪಿ. ಸತೀಶ್ ಕೂಡಲಗಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಪುರುಷೋತ್ತಮ್ ಮುಂಗ್ಲಿಮನೆ, ಅಕ್ರಮ ಸಕ್ರಮ ಸಮಿತಿ ಸದಸ್ಯೆ ಪರಮೇಶ್ವರಿ ಭಟ್, ಕಂದಾಯ ನಿರೀಕ್ಷಕ ಪ್ರಶಾಂತ್, ಗ್ರಾಮ ಕರಣಿಕ ಸತೀಶ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.