ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನ ವಾಣಿಜ್ಯ ಸಂಕೀರ್ಣವೊಂದರ ಐದನೇ ಮಹಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೊಕ್ಕೊಟ್ಟು ಕಲ್ಲಾಪುದಲ್ಲಿರುವ ಕಿಯಾಂಜಾ ಯೂನಿವರ್ಸಲ್ ವಾಣಿಜ್ಯ ಸಂಕೀರ್ಣದಲ್ಲಿರುವ ಮನ್ಹಾಸ್ ಮಂಡಿ ಹೋಟೆಲ್‌ನ ಹೊಗೆ ಹೊರಸೂಸುವ ಚಿಮಣಿಯ ತುದಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರೂ ಅದು ವ್ಯಾಪಿಸಿದೆ.
ಇನ್ನು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಐದನೇ ಮಹಡಿ ಹತ್ತಿ ಚಿಮಣಿಗೆ ತಗುಲಿದ ಬೆಂಕಿಯನ್ನು ನಂದಿಸಿ ಅನಾಹುತ ತಪ್ಪಿಸಿದ್ದಾರೆ.
ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ : ತಪ್ಪಿದ ಅನಾಹುತ
