ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ವತಿಯಿಂದ ಮಾ. 26ರಂದು ಪುತ್ತೂರಿನಲ್ಲಿ ನಡೆಯಲಿರುವ ಯುವ ಜಾಥಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಗುರುವಾರ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಸಹಜ್ ರೈ ಬಳೆಜ್ಜ ಪ್ರಾಸ್ತಾವಿಕವಾಗಿ ಮಾತನಾಡಿ, ಮಾರ್ಚ್ 26ರಂದು ಮಧ್ಯಾಹ್ನ 3 ಗಂಟೆಗೆ ಜಾಥಾ ನಡೆಯಲಿದ್ದು, ಜಾಥಾವು ಎರಡು ಭಾಗಳಿಂದ ಆಗಮಿಸಲಿದೆ. ವಿಟ್ಲದಿಂದ ಹಾಗೂ ಕುಂಬ್ರದಿಂದ ಜಾಥಾ ಆಗಮಿಸಿ ಕಲ್ಲೇಗ ಭಾರತ್ ಮಾತಾ ಸಭಾಭವನದಲ್ಲಿ ಸೇರಲಿದೆ. ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕೆಂದು ವಿನಂತಿಸಿದರು.

ವೇದಿಕೆಯಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮಪ್ಪ ಶೆಟ್ಟಿ, ಯುವಮೋರ್ಚಾ ಅಧ್ಯಕ್ಷ ನವೀನ್ ಪಡ್ನೂರು, ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಅಳ್ವಾ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ರತನ್ ರೈ ಕುಂಬ್ರ ಉಪಸ್ಥಿತರಿದ್ದರು.
ಸಭೆಯಲ್ಲಿ ಅಪ್ಪಯ್ಯ ಮಣಿಯಣಿ, ಜಿಲ್ಲಾ ಪ್ರಭಾರಿ ಯತೀಶ್, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ತಾ.ಪಂ. ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಹಾಗೂ ಯುವಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು.