ಪುತ್ತೂರು: ಹಿಂದು ಜಾಗರಣ ವೇದಿಕೆ ವತಿಯಿಂದ ಆಶ್ಲೇಷ ಬಲಿ, ಧಾರ್ಮಿಕ ಸಭೆ ಹಾಗೂ ಅರ್ಧ ಏಕಾಹ ಭಜನೆ ಮಾ.24 ಶುಕ್ರವಾರ ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿ ಇರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಸ್ಥಳದಲ್ಲಿ ನಡೆಯಲಿದೆ.
ಬೆಳಿಗ್ಗೆ 6 ರಿಂದ ಗಣಪತಿ ಹೋಮ, 7 ರಿಂದ ಅರ್ಧಏಕಹಾ ಭಜನೆ, ಸಂಜೆ 6 ರಿಂದ ಆಶ್ಲೇಷ ಬಲಿ, 7 ಕ್ಕೆ ಜನಜಾಗೃತಿ ಸಭೆ, 8 ರಿಂದ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಲಿದೆ.
ಹಿಂದೂ ಸಮಾಜದ ದೇವಸ್ಥಾನ, ದೈವಸ್ಥಾನ, ಮಠ ಮಂದಿರಗಳ ಪಾವಿತ್ರ್ಯತೆಯನ್ನು ರಕ್ಷಿಸುವ ಜತೆಗೆ ಆಸ್ತಿಪಾಸ್ತಿಗಳ ಸಂರಕ್ಷಣೆಗಾಗಿ, ಹಿಂದೂ ಸಮಾಜದ ಮೇಲಾಗುತ್ತಿರುವ ದೌರ್ಜನ್ಯ ದಬ್ಬಾಳಿಕೆ, ಗೋಹತ್ಯೆಗಳಂತ ಘೋರ ಕೃತ್ಯಗಳ ವಿರುದ್ಧ ಜನಜಾಗೃತಿಗಾಗಿ ಜನಜಾಗೃತಿ ಸಭೆ ಶುಕ್ರವಾರ ಸಂಜೆ 7 ಗಂಟೆಗೆ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಡಾ.ಎಂ.ಕೆ.ಪ್ರಸಾದ್ ಅಧ್ಯಕ್ಷತೆ ವಹಿಸುವರು. ಧಾರ್ಮಿಕ ಮುಖಂಡ ವೇ.ಮೂ. ಕುಂಟಾರು ರವೀಶ ತಂತ್ರಿ ದಿಕ್ಸೂಚಿ ಭಾಷಣ ಮಾಡುವರು.. ಮುಖ್ಯ ಅತಿಥಿಗಳಾಗಿ ಹಿಂ.ಜಾ.ವೇ. ಕರ್ನಾಟಕ ದಕ್ಷಿಣ ಪ್ರಾಂತ ಸಂಪರ್ಕ ಪ್ರಮುಖ್ ರವಿರಾಜ ಕಡಬ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಪಾಲ್ಗೊಳ್ಳಲಿದ್ದಾರೆ ಎಂದು ಹಿಂದು ಜಾಗರಣ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.