ಪುತ್ತೂರು: ಕಡಬ ತಾಲೂಕು ಆಡಳಿತ ಸೌಧ, ತಾಲೂಕು ಪಂಚಾಯಿತಿ ಹಾಗೂ ಕೊಯಿಲ ಪಶು ವೈದ್ಯಕೀಯ ಕಾಲೇಜಿನ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭ ಹಾಗೂ ಸುಬ್ರಹ್ಮಣ್ಯ ದೇವಸ್ಥಾನದ ಮೂರನೇ ಹಂತದ ಮಾಸ್ಟರ್ ಪ್ಲಾನ್ ಕಾಮಗಾರಿಯ ಪಾರಂಪರಿಕ ರಥಬೀದಿ ಮತ್ತು ಇತರ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ ಮಾ.24 ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಕಡಬ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆಯಲಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಿದ್ದು, ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಕಂದಾಯ ಸಚಿವ ಆರ್.ಅಶೋಕ್, ಪಶುಸಂಗೋಪನೆ ಇಲಾಖೆ ಸಚಿವ ಪ್ರಭು ಜಿ. ಚೌಹಾಣ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವ ವಿ.ಸೋಮಣ್ಣ, ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಗೌರವ ಉಪಸ್ಥಿತರಿರುವರು.
ಸಮಾರಂಭದ ಅಧ್ಯಕ್ಷತೆಯನ್ನು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಸಚಿವ ಎಸ್.ಅಂಗಾರ ವಹಿಸಲಿದ್ದು, ರಾಜ್ಯಸಭೆ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ಸಂಸದ ನಳಿನ್ ಕುಮಾರ್ ಕಟೀಲ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಶಾಸಕರಾದ ಸಂಜೀವ ಮಠಂದೂರು, ಡಾ.ಭರತ್ ಶೆಟ್ಟಿ ವೈ, ರಾಜೇಶ್ ನಾಯ್ಕ್ ಯು., ಉಮಾನಾಥ ಎ. ಕೋಟ್ಯಾನ್, ಯು.ಟಿ.ಖಾದರ್, ಹರೀಶ್ ಪೂಂಜಾ, ಡಿ.ವೇದವ್ಯಾಸ ಕಾಮತ್, ವಿಧಾನಸಭಾ ಸದಸ್ಯರಾದ ಬಿ.ಎಂ.ಫಾರೂಕ್, ಆಯನೂರು ಮಂಜುನಾಥ, ಪ್ರತಾಪಸಿಂಹ ನಾಯಕ್, ಹರೀಶ್ ಕುಮಾರ್, ಎಸ್.ಎಲ್.ಭೋಜೇಗೌಡ, ಮಂಜುನಾಥ ಭಂಡಾರಿ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.