ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈಕೋರ್ಟ್‌ ತಡೆ : ವಿದ್ಯಾರ್ಥಿಗಳು ನಿರಾಳ

ಪರೀಕ್ಷೆ ಸಮಯದಲ್ಲಿ ಮುಷ್ಕರ ನಡೆಸಬಾರದು ಎಂದು ಹೈಕೋರ್ಟ್‌ ತಡೆ

ಬೆಂಗಳೂರು: ಇಂದಿನಿಂದ ನಡೆಯಬೇಕಿದ್ದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಶೇ.15ರಷ್ಟು ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ಶುಕ್ರವಾರದಿಂದ ಮುಷ್ಕರ ಹೂಡುವುದಾಗಿ ಘೋಷಿಸಿದ್ದರು.

ಇದೀಗ ಹೈಕೋರ್ಟ್ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ ನೀಡಿದೆ. ರಾಜ್ಯದಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು ಮುಷ್ಕರದಿಂದ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಮೂರು ವಾರಗಳ ಕಾಲ ಮುಷ್ಕರ ನಡೆಸಬಾರದು ಎಂದು ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ, ಅಶೋಕ್ ಎಸ್.ಕಿಣಗಿ ಅವರಿದ್ದ ಪೀಠ ಸಂಘಟನೆಗಳಿಗೆ ಸೂಚನೆ ನೀಡಿದೆ.
ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆಯ ಮುಷ್ಕರವನ್ನು ಪ್ರಶ್ನಿಸಿ ಎಚ್.ಎಂ. ವೆಂಕಟೇಶ್ ಎಂಬುವವರು ಹೈಕೋರ್ಟ್‌ಗೆ ಪಿಐಎಲ್ ಹಾಕಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಷ್ಕರಕ್ಕೆ ತಡೆ ನೀಡಿದೆ.





































ಮಾ.21ರಂದೇ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಈ ವೇಳೆ ರಾಜ್ಯ ಸರ್ಕಾರ ಶೇಕಡ 15ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಹೀಗಾಗಿ ಮುಷ್ಕರ ಹಿಂಪಡೆಯಲಾಗಿತ್ತು. ಆದರೆ ಈಗ ಮತ್ತೆ ಸಮಾನ‌ ಮನಸ್ಕರ ವೇದಿಕೆ ಸಾರಿಗೆ ಮುಷ್ಕರಕ್ಕೆ ಕರೆ ನೀಡಿದೆ.

 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top