ಪುತ್ತೂರು: ಪುತ್ತೂರು ರೋಟರಿ ಕ್ಲಬ್ ಪುತ್ತೂರು ಸಿಟಿ ಚರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುವ ನೆಲ್ಲಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಶುಕ್ರವಾರ ನಡೆಯಿತು.
ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ ಮಾತನಾಡಿ, ರೋಟರಿ ಸಂಘಟನೆ ಉತ್ತಮ ನಿರ್ಧಾರ ತೆಗೆದುಕೊಂಡು ಎಲ್ ಕೆಜಿ, ಯುಕೆಜಿ ತರಗತಿ ಪ್ರಾರಂಭಿಸಿ ಇತಿಹಾಸ ನಿರ್ಮಿಸಲು ಹೊರಟ್ಟಿದಾರೆ. ಮಕ್ಕಳ ಆರೋಗ್ಯದ ಕಾಳಜಿ ಜತೆ ಸರಕಾರಿ ಶಾಲೆಯ ಉಳಿಸುವ ನಿಟ್ಟಿನಲ್ಲಿ ವಿಗೆ 5 ಕೋಟಿ ವೆಚ್ಚದಲ್ಲಿ 111 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ಕೊಡುವ ಕೆಲಸ ಆಗಿದೆ ಎಂದರು.
ಉಲ್ಲಾಸ್ ಪೈ ಪ್ರಾಸ್ತವಿಕವಾಗಿ ಮಾತನಾಡಿದರು. ಸಹಾಯಕ ಶಿಕ್ಷಕ ವಿಘ್ನೇಶ್ವರ ಭಟ್, ಅಂಗನವಾಡಿ ಕಾರ್ಯಕರ್ತೆಯರು, ಎಸ್ ಡಿ ಎಮ್ ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.