ಪುತ್ತೂರು: ಬೆಂಗಳೂರಿನಲ್ಲಿ ನೆಲೆಸಿರುವ ಪುತ್ತೂರಿಗರ ‘ಸ್ನೇಹಮಿಲನ’ ಕಾರ್ಯಕ್ರಮ ನಾಳೆ ಅಂದರೆ ಮಾರ್ಚ್ 25ರಂದು ಸಂಜೆ 7ಕ್ಕೆ ಬೆಂಗಳೂರು ವಿಜಯನಗರದ ಬಂಟರ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿರುವರು. ಶ್ರೀ ವಿದ್ಯಾಭೂಷಣ ಅವರ ಗಾಯನ ಕಾರ್ಯಕ್ರಮವನ್ನು ಇದೇ ಸಂದರ್ಭ ಏರ್ಪಡಿಸಲಾಗಿದೆ.
ಬೆಂಗಳೂರಿನ ಅತ್ತಿಗುಪ್ಪೆಯಲ್ಲಿರುವ ಮೆಟ್ರೋ ನಿಲ್ದಾಣ ಪಕ್ಕವಿರುವ ಬಂಟರ ಭವನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ವಿದ್ಯೆ, ಉದ್ಯೋಗ, ವ್ಯಾಪಾರ ಹಾಗೂ ಇನ್ನಿತರ ಉದ್ದೇಶಗಳಿಗಾಗಿ ನೆಲೆಸಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಜನರಿಗಾಗಿ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸಂಜೀವ ಮಠಂದೂರು ಅಭಿಮಾನಿ ಬಳಗದ ವತಿಯಿಂದ ‘ಬನ್ನಿ, ರಾಜಧಾನಿಯಲ್ಲಿ ನಾವೆಲ್ಲರೂ ಸೇರಿ ಒಗ್ಗಟ್ಟಾಗೋಣ’ ಎನ್ನುವ ಧ್ಯೇಯ ವಾಕ್ಯದಡಿ ಕಾರ್ಯಕ್ರಮ ನಡೆಯಲಿದೆ.