ಪುತ್ತೂರು: ತಾಲೂಕಿನ ಕುದ್ದುಪದವು-ತೋರಣಕಟ್ಟೆ-ಸಾಜ ಬಿಳಿಯೂರುಕಟ್ಟೆ ರಸ್ತೆ ಅಭಿವೃದ್ಧಿಗೆ 1.80 ಕೋಟಿ ಅನುದಾನ ಒದಗಿಸಲಾಗಿದ್ದು, ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಬಲ್ನಾಡು ಗ್ರಾಮಕ್ಕೆ 17.40 ಕೋಟಿ ರೂ. ಅನುದಾನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ನೀಡಲಾಗಿದೆ. ಇದೀಗ ಈ ಸಂಪರ್ಕ ರಸ್ತೆಯ ಅಭಿವೃದ್ಧಿಗೆ ಶಿಲಾನ್ಯಾಸ ಮಾಡಲಾಗಿದ್ದು, ಶೀಘ್ರ ಸಾರ್ವಜನಿಕರಿಗೆ ಲೋಕಾರ್ಪಣೆಯಾಗಲಿ ಎಂದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮಾತನಾಡಿ, ಪ್ರಸ್ತುತ ಜಗತ್ತು ನಮ್ಮ ಕಡೆ ನೋಡಲು ನರೇಂದ್ರ ಮೋದಿಜಿಯವರ ದೂರದೃಷ್ಟಿತ್ವ ಕಾರಣ. ಜತೆಗೆ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಯೂ ಆಗಿದೆ ಎಂದರು.
ಮಂಡಲ ಅಧ್ಯಕ್ಷ ಬಾಲಸುಬ್ರಮಣ್ಯ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜಾ ರಾಧಕೃಷ್ಣ ಆಳ್ವ , ಪಂಚಾಯಿತಿ ಉಪಾಧ್ಯಕ್ಷೆ ಪರಮೇಶ್ವರಿ ಭಟ್ ಬಬ್ಬಿಲಿ, ಸದಸ್ಯ ಬಾಲಸುಬ್ರಹ್ಮಣ್ಯ ಕೊಟ್ಯಾನ್, ಶಕ್ತಿಕೇಂದ್ರ ಸಂಚಾಲಕ ಅಕ್ಷಯ್ ಶೆಟ್ಟಿ , ಕಾರ್ಯಕರ್ತರು, ಊರಿನ ನಾಗರಿಕರು ಉಪಸ್ಥತರಿದ್ದರು.