ಆಧುನಿಕ ಭಾರತಕ್ಕೆ ಮಾದರಿ ಚಿಕ್ಕಬಳ್ಳಾಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ

ಸರ್ ಎಂ.ವಿಶ್ವೇಶ್ವರಯ್ಯ ಅವರು ಹುಟ್ಟಿದ ಪುಣ್ಯ ಭೂಮಿಗೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ

ಬೆಂಗಳೂರು: ಚಿಕ್ಕಬಳ್ಳಾಪುರ ಆಧುನಿಕ ಭಾರತಕ್ಕೆ ಒಂದು ಮಾದರಿಯಾಗಿದ್ದು, ಸರ್ ಎಂ.ವಿಶ್ವೇಶ್ವರಯ್ಯ ಅವರು ಹುಟ್ಟಿದ ಪುಣ್ಯ ಭೂಮಿಗೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದರು.
ಚಿಕ್ಕಬಳ್ಳಾಪುರದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಲೋಕಾರ್ಪಣೆ ಮಾಡಿದ ಬಳಿಕ ಜನತೆಯನ್ನುದ್ದೇಶಿಸಿ ಮೋದಿಯವರು ಮಾತನಾಡಿದರು.
ಈ ವೇಳೆ ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿಯವರು, ಕನ್ನಡ ಭಾಷೆ ಹಾಗೂ ಚಿಕ್ಕಬಳ್ಳಾಪುರವನ್ನು ಕೊಂಡಾಡಿದರು.

ಕರ್ನಾಟಕದ ನನ್ನ ಸಹೋದರ, ಸಹೋದರಿಯರಿಗೆ ನಮಸ್ಕಾರ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ ಅವರು, ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ವಿಶ್ವೇಶ್ವರಯ್ಯ ಜನ್ಮಸ್ಥಳವಾಗಿದೆ. ಇಂತಹ ಪುಣ್ಯಭೂಮಿಗೆ ಬಂದಿದ್ದು ನನ್ನ ಸೌಭಾಗ್ಯ. ಸತ್ಯಸಾಯಿ ಆಶ್ರಮದಿಂದ ಶೈಕ್ಷಣಿಕ, ಸಾಮಾಜಿಕ, ವೈದ್ಯಕೀಯ ಸೇವೆ ನಡೆಯುತ್ತಿದೆ. 2014ಕ್ಕಿಂತ ಮೊದಲು 300ಕ್ಕಿಂತ ಕಡಿಮೆ ಮೆಡಿಕಲ್ ಕಾಲೇಜುಗಳಿದ್ದವು ಇಂದು ದೇಶದಲ್ಲಿ 650ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳಿವೆ. ಕರ್ನಾಟಕದಲ್ಲೇ ಸುಮಾರು 70ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳು ಇವೆ. ಡಬಲ್​ ಇಂಜಿನ್ ಸರ್ಕಾರದಿಂದ ಕರ್ನಾಟಕ ಅಭಿವೃದ್ಧಿ ಆಗುತ್ತಿದೆ ಎಂದು ಹೇಳಿದರು.































 
 

ಬಡವರ ಅಭಿವೃದ್ಧಿಯೇ ಬಿಜೆಪಿಯ ಪರಮೋಚ್ಛ ಗುರಿಯಾಗಿದೆ. ಆಯುಷ್ಮಾನ ಭಾರತ್ ಯೋಜನೆಯಿಂದ ಬಡ ರೋಗಿಗಳಿಗೆ ಅನುಕೂಲವಾಗಿದೆ. ಕರ್ನಾಟಕದ ಲಕ್ಷಾಂತರ ರೋಗಿಗಳಿಗೆ ಯೋಜನೆಯಿಂದ ಅನುಕೂಲವಾಗಿದೆ ಎಂದು ಹೇಳಿದರು.
ಬಿಜೆಪಿ ಸರ್ಕಾರ ದೇಶದ ಅಭಿವೃದ್ದಿಗೆ ನಿರಂತರ ಪ್ರಯತ್ನ ಮಾಡುತ್ತಿದೆ. ಕಡಿಮೆ ಸಮಯದಲ್ಲಿ ದೇಶದ ಅಭಿವೃದ್ಧಿ ಆಗುತ್ತಿದೆ. ಸಾಮಾಜಿಕ ಸಂಘಟನೆಗೂ ಸರ್ಕಾರ ಶ್ರಮಿಸುತ್ತಿದೆ. ದಲಿತ, ಬಡವ ಎಲ್ಲಾ ವರ್ಗದ ಜನರ ಸಶಕ್ತೀಕರಣಕ್ಕೆ ಒತ್ತು ನೀಡಲಾಗುತ್ತಿದೆ. ದೇಶದಲ್ಲಿ ಇತ್ತೀಚಿಗ ಮೆಡಿಕಲ್ ಕಾಲೇಜುಗಳ ಉದ್ಘಾಟನೆಯಾಗುತ್ತಿದೆ. ಕನ್ನಡ ಭಾಷೆ ದೇಶದಲ್ಲಿ ಸಮೃದ್ಧ ಭಾಷೆಯಾಗಿದೆ. ಕನ್ನಡದಲ್ಲೂ ಮೆಡಿಕಲ್ ಶಿಕ್ಷಣ ಇರಬೇಕು. ಬಿಜೆಪಿ ಬಡವರ ಸೇವೆಗೆ ಸದಾ ಸಿದ್ದವಾಗಿದೆ’ ಎಂದು ಮೋದಿ ಅವರು ಕನ್ನಡ ಭಾಷೆಯನ್ನು ಹಾಡಿ ಹೊಗಳಿದರು.

ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು. ಆರೋಗ್ಯದ ಜೊತೆಗೆ ಮಹಿಳೆಯರ ಕಲ್ಯಾಣ ನಮ್ಮ ಸರ್ಕಾರದ ಗುರಿ. ಗ್ರಾಮಗಳಲ್ಲಿ ಮಹಿಳಾ ಸಂಘಗಳ ಮೂಲಕ ಮಹಿಳೆಯರ ಸಶಕ್ತೀಕರಣವಾಗುತ್ತಿದೆ ಎಂದು ಮೋದಿ ಹೇಳಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top