ಮಂಗಳೂರು: ನಗರದ ಮರೋಳಿ ಎಂಬಲ್ಲಿ ‘ರಂಗ್ ದೇ ಬರ್ಸಾ’ ಹೆಸರಿನಲ್ಲಿ ನಡೆಯುತ್ತಿದ್ದ ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿರುವ ಮಾ.26 ರಂದು ಘಟನೆ ನಡೆದಿದೆ.
ಡಿಜೆ ಪಾರ್ಟಿ ಜೊತೆಗೆ ಬಣ್ಣ ಎರಚಿ ಯುವಕ-ಯುವತಿಯರು ಸಂಭ್ರಮಿಸುತ್ತಿದ್ದು, ಅನ್ಯಕೋಮಿನ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ಭಜರಂಗದಳ ದಾಳಿ ನಡೆಸಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದಿದ್ದಾರೆ.
ಈ ವೇಳೆ ಭಜರಂಗದಳ ಕಾರ್ಯಕರ್ತರು ಮತ್ತು ಆಯೋಜಕರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಭಜರಂಗದಳದ ಕಾರ್ಯಕರ್ತರು ಆಯೋಜಕರು ಮತ್ತು ಕೆಲವರ ಮೇಲೆ ಹಲ್ಲೆಗೂ ಯತ್ನಿಸಿರುವುದಾಗಿ ವರದಿಯಾಗಿದೆ.
ಇನ್ನು ಪೊಲೀಸರು ಮಧ್ಯ ಪ್ರವೇಶಿಸಿ ಭಜರಂಗದಳ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ