ಬೆಂಗಳೂರು : ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆಯಲ್ಲಿ ಭದ್ರತಾ ಲೋಪವಾಗಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್, ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ ಆಗಿಲ್ಲ ಎಂದಿದ್ದಾರೆ. ಈ ಕುರಿತ ವಿಡಿಯೋವೊಂದನ್ನು ಟ್ವೀಟರ್ನಲ್ಲಿ ಹಂಚಿಕೊಂಡಿರುವ ಅಲೋಕ್ ಕುಮಾರ್, ಪ್ರಧಾನಿ ವಾಹನದ ಕಡೆಗೆ ನುಗ್ಗಿದ ವ್ಯಕ್ತಿಯನ್ನು ನಾನು ಮತ್ತು ಎಸ್ಪಿಜಿ ಪಡೆ ಖುದ್ದು ವಶಕ್ಕೆ ಪಡೆದಿದ್ದೇವೆ. ಮೋದಿ ಅವರ ವಾಹನದಿಂದ ಬಹಳ ದೂರದಲ್ಲೇ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಮೋದಿ ಭದ್ರತೆಯಲ್ಲಿ ಲೋಪ ಆಗಿಲ್ಲ : ಎಡಿಜಿಪಿ ಅಲೋಕ್ ಕುಮಾರ್
