ಸುಳ್ಯ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ದ ಸುಳ್ಯದ ಕಚೇರಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ವಶಪಡಿಸಿಕೊಂಡಿದೆ. ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರುವ ತಾಹಿರಾ ಕಾಂಪ್ಲೆಕ್ಸಿನಲ್ಲಿ ಮೊದಲ ಮಹಡಿಯಲ್ಲಿ ಕಚೇರಿ ಇದೆ ಎಂದು ಹೇಳಲಾಗಿದೆ.
ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಎನ್.ಐ.ಎ. ಚುರುಕುಗೊಳಿಸಿದೆ. ಸುಳ್ಯದಲ್ಲಿರುವ ಪಿಎಫ್ಐ ಕಚೇರಿಯನ್ನು ಭಯೋತ್ಪಾದನಾ ಕೃತ್ಯಗಳಿಗೆ ಬಳಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ಕಚೇರಿಯಲ್ಲೇ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಮೂಲಗಳು ವಿವರಿಸಿವೆ. ತಮ್ಮ ಮೂರನೇ ಪ್ರಯತ್ನದಲ್ಲಿ ದುಷ್ಕರ್ಮಿಗಳು ಪ್ರವೀಣ್ ಅವರನ್ನು ಹತ್ಯೆಗೈದಿದ್ದರು.