ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ : ಇಂದಿನ ಕಾರ್ಯಕ್ರಮ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಮಂಗಳವಾರದ ಕಾರ್ಯಕ್ರಮ ಈ ಕೆಳಗಿನಂತಿದೆ.

ವೈದಿಕ ಕಾರ್ಯಕ್ರಮದ ಅಂಗವಾಗಿ ಪ್ರಾತಃಕಾಲ 5 ರಿಂದ ಉಷಃಪೂಜೆ, ಅಂಕುರ ಪೂಜೆ, ಮಹಾಗಣಪತಿ ಹೋಮ, ತ್ರಿಕಾಲ ಪೂಜೆ, ಅನುಜ್ಞಾ ಕಲಶಾಭಿಷೇಕ, ಮಧ್ಯಾಹ್ನ 12 ಕ್ಕೆ ತ್ರಿಕಾಲ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 5 ರಿಂದ ದೀಪಾರಾಧನೆ, ತ್ರಿಕಾಲಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

ಸಂಜೆ 6 ರಿಂದ ಉಪ್ಪಿನಂಗಡಿ ರಾಮನಗರ ಶಾರದ ವನಿತಾ ಭಜನಾ ಮಂಡಳಿಯಿಂದ ಮತ್ತು 7 ರಿಂದ ಪುರುಷರಕಟ್ಟೆ ಇಂದಿರಾನಗರ ವನದುರ್ಗಾಂಬಿಕಾ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 6.30 ರಿಂದ ಗುರುಪ್ರಿಯಾ ನಾಯಕ್ ಮತ್ತು ಬಳಗದವರಿಂದ ಕಾರ್ಯಕ್ರಮ, 8 ರಿಂದ ಅರವಿಂದ ಆಚಾರ್ಯ ಮಾಣಿಲ ಮತ್ತು ಗೀತಾ ಗಂಗಾಧರ ಆಚಾರ್ಯ ಅವರಿಂದ ಭಕ್ತ ರಸಧಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top